– ಚನ್ನಪಟ್ಟಣ ಜನಕ್ಕೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್ ಗೆಲ್ಲಿಸಿ ಎಂದ ಶಾಸಕ
ರಾಮನಗರ: ಕುಮಾರಸ್ವಾಮಿ (HD Kumaraswamy) ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಲೇವಡಿ ಮಾಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಪರ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸಿದರು. ತಾಲೂಕಿನ ಕೋಡಂಬಳ್ಳಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಅಭ್ಯರ್ಥಿ ಯೋಗೇಶ್ವರ್, ಶಾಸಕ ಹೆಚ್.ಸಿ ಬಾಲಕೃಷ್ಣ, ಎಂಎಲ್‌ಸಿಗಳಾದ ಎಸ್.ರವಿ, ಪುಟ್ಟಣ್ಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲ್ಲ – ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕೆ ಬೆಂಬಲ
ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ. ಕುಮಾರಸ್ವಾಮಿ ಯಾರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಎಲ್ಲಾ ಕಡೆ ಅವರ ಕುಟುಂಬದರನ್ನ ಪ್ರತಿಷ್ಠಾಪನೆ ಮಾಡ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ವಿಜಯಪುರದ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ
ಕುಮಾರಸ್ವಾಮಿಗೆ ನಾವ್ಯಾರೂ ಒಕ್ಕಲಿಗರ ರೀತಿ ಕಾಣುವುದಿಲ್ವಾ? ನಾವು ಅಣ್ಣ-ತಮ್ಮಂದಿರು, ಈ ಜಿಲ್ಲೆಯ ಮಕ್ಕಳು ನಾವು. ಜಗಳ ಆಡಿದ್ದೀವಿ, ಆದ್ರೆ ದ್ವೇಷ ಮಾಡಿಲ್ಲ. ಸಿಪಿವೈಗೆ ಅನ್ಯಾಯ ಆಗೋದು ಗೊತ್ತಾದಾಗ ಅವರನ್ನು ಕರೆತಂದು ಟಿಕೆಟ್ ಕೊಟ್ಟಿದ್ದೀವಿ. ಅವರು ಟೂರಿಂಗ್ ಟಾಕೀಸ್. ಮಂಡ್ಯಕ್ಕೆ ಹೋದ್ರು, ರಾಮನಗರಕ್ಕೂ ಹೋದ್ರು ಈಗ ಇಲ್ಲಿಗೆ ಬಂದವ್ರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ
ಚನ್ನಪಟ್ಟಣದವರಿಗೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್ ಗೆಲ್ಲಿಸಿ:
ರಾಮನಗರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ತಂದು ಶಾಸಕನನ್ನಾಗಿ ಸುರೇಶ್ ಮಾಡಿದ್ರು. ಚನ್ನಪಟ್ಟಣದವರಿಗೆ ಸ್ವಾಭಿಮಾನ ಇಲ್ವಾ? ತಾಲೂಕಿಗೆ ನೀರುಕೊಟ್ಟ ಯೋಗೇಶ್ವರ್‌ನ ಸೋಲಿಸಿದ್ರಿ. ನೀರು ಕೊಟ್ಟ ಯೋಗೇಶ್ವರ್‌ಗೆ ವಿಷ ಹಾಕಿದ್ರಿ. ನಿಮಗೆ ದೇವರು ಒಳ್ಳೆಯದು ಮಾಡಲ್ಲ. ಈಗ ಸ್ವಾಭಿಮಾನ ಬೆಳೆಸಿಕೊಳ್ಳಿ ಯೋಗೇಶ್ವರ್ ಗೆಲ್ಲಿಸಿ ಎಂದು ಶಾಸಕ ಮಾರ್ಮಿಕವಾಗಿ ನುಡಿದಿದ್ದರೆ.