ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು

Public TV
1 Min Read
Kalaburagi Dharwad Benches of the High Court

ಕಲಬುರಗಿ: ಮುಂಬರುವ ಮಹಾಶಿವರಾತ್ರಿ ಹಬ್ಬದ (Maha Shivaratri) ಅಂಗವಾಗಿ ಆಳಂದ ಪಟ್ಟಣದಲ್ಲಿ ನಡೆಯುವ ಶ್ರೀ ರಾಘವ ಚೈತನ್ಯ ರಥಯಾತ್ರೆಗೆ ಕಲಬುರಗಿ ಹೈಕೋರ್ಟ್ ಪೀಠ (Kalaburagi, Dharwad Benches of the High Court) ಷರತ್ತು ಬದ್ಧವಾದ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಜಿಲ್ಲೆಯ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾದಲ್ಲಿನ (Ladle Mashak Dargah) ಶಿವಲಿಂಗಕ್ಕೆ (Sivalinga) ಪ್ರತಿ ವರ್ಷ ಹಿಂದೂಗಳು ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಈ ಬಾರಿ ಮಹಾಶಿವರಾತ್ರಿಯಂದು ರಥಯಾತ್ರೆಗೆ ಅನುಮತಿ ನೀಡುವಂತೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಕಾಬಡೆ ಹಾಗೂ ಬಿಜೆಪಿ ಮುಖಂಡ ಹರ್ಷಾನಂದ ಗುತ್ತೇದಾರ್ ಅರ್ಜಿ ಸಲ್ಲಿಸಿದ್ದರು. ಇದೀಗ ಕಲಬುರಗಿ ಹೈಕೋರ್ಟ್ ರಥಯಾತ್ರೆ ನಡೆಸಲು ಷರತ್ತು ಬದ್ಧ ಅನುಮತಿ ನೀಡಿದೆ. ಇದನ್ನೂ ಓದಿ: ಒತ್ತುವರಿ ತೆರವು – ಮದ್ಯದ ಉದ್ಯಮಿಯ 400 ಕೋಟಿ ರೂ. ಮೌಲ್ಯದ ಫಾರ್ಮ್‌ಹೌಸ್‌ ಧ್ವಂಸ

Ladle Mashak Dargah SHIVALINGA

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ವಿವಾದದ ಹಿನ್ನೆಲೆಯಲ್ಲಿ, ಡಿಜೆ (ಧ್ವನಿವರ್ಧಕ), ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವಂತಿಲ್ಲ, ಅನ್ಯ ಸಮುದಾಯದ ವಿರುದ್ಧ ಘೋಷಣೆ ಕೂಗುವಂತಿಲ್ಲ, ವಿವಾದಿತ ಸ್ಥಳದ ಕಡೆಗೆ ರಥ ಕೊಂಡ್ಯೊಯುವಂತಿಲ್ಲ, ಸೂರ್ಯಾಸ್ತದ ನಂತರ ರಥಯಾತ್ರೆ ಮಾಡುವಂತಿಲ್ಲ ಎಂಬ ಐದು ಷರತ್ತುಗಳನ್ನು ವಿಧಿಸಿ ರಥಯಾತ್ರೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.

ಕಳೆದ 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಯ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದನ್ನೂ ಓದಿ: ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

Share This Article