ಶಿವಮೊಗ್ಗ: ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದು ಮಾಧ್ಯಮಗಳಿಗೆ ಇಷ್ಟವಿಲ್ಲ. ಕುಮಾರಸ್ವಾಮಿ ಅವರ ಜನ ಪರ ಕಾರ್ಯಗಳ ಬಗ್ಗೆ ಜನರಿಗೆ ತೋರಿಸುವ ಆಸಕ್ತಿ ಇಲ್ಲ. ಸರ್ಕಾರ ಹೋದ ಮೇಲೆ ಸಂತೋಷ ಪಡಿ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
ನಗರಕ್ಕೆ ಆಗಮಿಸಿದ್ದ ವೇಳೆ ಪರಮೇಶ್ವರ್ ಭೇಟಿ, ರಮೇಶ್ ಜಾರಕಿಹೊಳಿ ಅವರ ಬಂಡಾಯದ ಕುರಿತು ಮಾಧ್ಯಮ ಪ್ರತಿನಿಧಿಗಳಿಂದ ಪ್ರಶ್ನೆ ಕೇಳಿಬರುತ್ತಿದಂತೆ ಸಿಡಿಮಿಡಿಗೊಂಡ ಅವರು, ಇಂತಹ ಪ್ರಶ್ನೆಗಳನ್ನು ಅವರಿಗೆ ಕೇಳಿ. ಇದು ನಿಮಗೇ ಅತ್ಯಂತ ಪ್ರಮುಖ ವಿಷಯವೇ ಎಂದು ಖಾರವಾಗಿ ಮರುಪ್ರಶ್ನೆ ಹಾಕಿದರು.
Advertisement
Advertisement
ಇಂತಹ ವಿಷಯಗಳನ್ನೇ ಬೆಳಗ್ಗೆಯಿಂದ ಸಂಜೆವರೆಗೂ ಕಳೆದ ಮೂರು ತಿಂಗಳಿನಿಂದ ತೋರಿಸುತ್ತಿದ್ದೀರಿ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಕುರಿತು ನೀವು ಯಾಕೆ ವರದಿ ಮಾಡುವುದಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
Advertisement
ಸಕುಮಾರಸ್ವಾಮಿ ಅವರ ಒಳ್ಳೆಯ ಕೆಲಸಗಳು ನಿಮ್ಮಗೆ ಕಾಣಿಸುವುದಿಲ್ಲ. ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿರುವುದು ಒಂದು ಸಮುದಾಯಕ್ಕೆ ಇಷ್ಟವಿಲ್ಲ. ಅದ್ದರಿಂದ ಸರ್ಕಾರ ಉರುಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಬೀಳಿಸಲು ಮುಹೂರ್ತ ಫಿಕ್ಸ್ ಮಾಡಿದವರಿಗೆ ನಿರಾಸೆ ಉಂಟಾಗಲಿದೆ ಎಂದರು.
Advertisement
ಬಳಿಕ ಶಿವಮೊಗ್ಗದ ಮಲೆನಾಡು ಸೊಸೈಟಿ ರಜತ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಎಚ್‍ಡಿಡಿ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಪರವಾಗಿ ನೇರ ಬ್ಯಾಟಿಂಗ್ ನಡೆಸಿದರು. ಕುಮಾರಸ್ವಾಮಿ ಬಗ್ಗೆ ವಾತ್ಸಲ್ಯದಿಂದ ಮಾತನಾಡುತ್ತಿಲ್ಲ. ಕೇವಲ 37 ಜನ ಶಾಸಕರನ್ನು ಇಟ್ಟುಕೊಂಡು ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವಂತ ಸ್ಥೈರ್ಯ ತೋರಿದ್ದಾರೆ. ರಾಜ್ಯದ ಒಂದು ಸಮುದಾಯ ಸರ್ಕಾರ ಹೋಗಲಿ ಎಂದು ನಿರಂತರವಾಗಿ ಪ್ರಯತ್ನಿಸುತ್ತಿದೆ. ಸರ್ಕಾರ ಬೀಳಿಸಲು ಮಹೂರ್ತ ಫಿಕ್ಸ್ ಮಾಡಿದವರು ನಿರಾಶರಾಗಲಿದ್ದಾರೆ. ಮೈತ್ರಿ ಸರ್ಕಾರಲ್ಲಿ ಸಣ್ಣ ಪುಟ್ಟ ದೋಷಗಳಿವೆ ಆದರೆ, ಸರ್ಕಾರ ಬೀಳುವುದಿಲ್ಲ ಎಂದು ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ, ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸಿಎಂ ಎಚ್‍ಡಿಕೆ 37 ಜನ ಶಾಸಕರನ್ನು ಇಟ್ಟುಕೊಂಡು ನಾಡಿನ ಅಳ್ವಿಕೆ ನಡೆಸುತ್ತಿರುವುದು ಅಚ್ಚರಿಯ ವಿಷಯ. ದೈವಶಕ್ತಿ ಇದರ ಹಿಂದೆ ಇರುವುದರಿಂದ ಮಾತ್ರ ಸಾಧ್ಯವಾಗಿದೆ. ಇದಕ್ಕೆ ವಿರುದ್ಧವಾಗಿ ನಡೆಯುವುದು ದೈವದ ವಿರುದ್ಧದ ಕೆಲಸ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=Qy8pYpFkfo0