Latest

ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ

Published

on

ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ
Share this

ಬೆಂಗಳೂರು: ಪಾಲಿಕೆ ಚುನಾವಣೆಯ ಫಲಿತಾಂಶದ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ. ಕುಮಾರಸ್ವಾಮಿ ಬಳಿಯೂ ಮಾತನಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ

ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ಖರ್ಗೆ ಮಾತನಾಡಿರುವುದು ಸತ್ಯ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರ ಜೊತೆ ಸಿಎಂ ಮಾತುಕತೆ

ಬಿಜೆಪಿಯವರು ಯಾರೂ ನನ್ನ ಜೊತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ ದೇವೇಗೌಡರು, ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿದ್ದಾರೆ ಅನ್ನಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತನಾಡುತ್ತಾರೆ ನೋಡೋಣ. ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರೂ ಮಾತನಾಡಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.

ಕಲಬುರಗಿಯಲ್ಲಿ ನಾಲ್ಕು ಸೀಟ್ ಬಂದಿವೆ. ನಾಲ್ಕು ಸೀಟ್ ಬರುತ್ತವೆ ಎಂದು ನಾನು ಅಂದುಕೊಂಡಿರಲಿಲ್ಲ. ಹೆಚ್‍ಡಿಕೆ ಹೋಗಿ ಪ್ರಚಾರ ಮಾಡಿದ್ದರು. ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ. ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ, ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ. ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು, ಒಂದು ಸೀಟ್ ಬಂದಿದೆ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ ಎಂದರು.

ಸ್ಥಳೀಯ ಸಂಸ್ಥೆ ಫಲಿತಾಂಶದ ಬಗ್ಗೆ ಯಾರೂ ನಿರಾಶೆಯಾಗಬೇಕಿಲ್ಲ, ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ. ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡುತ್ತೇವೆ. ಸೋಲು- ಗೆಲುವು ಎಂದು ನೋಡಿ ಕುಳಿತುಕೊಳ್ಳಲು ಆಗುವುದಿಲ್ಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ಎಂದರು.

Click to comment

Leave a Reply

Your email address will not be published. Required fields are marked *

Advertisement
Advertisement