ಬೆಂಗಳೂರು: ಮೇ 28 ರಂದು ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ (New Parliament House) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಭಾಗಿಯಾಗಲು ನಿರ್ಧರಿಸಿದ್ದಾರೆ. ಈ ಮೂಲಕ ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ವಿಪಕ್ಷಗಳ ನಿರ್ಧಾರಕ್ಕೆ ಅವರು ಡೋಂಟ್‍ಕೇರ್ ಎಂದಿದ್ದಾರೆ.
ಗುರುವಾರ ಜೆಡಿಎಸ್ (JDS) ಸಭೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯವನ್ನು ಆಲಿಸಿದ್ದಾರೆ. ಈ ವೇಳೆ ಶಾಸಕರು ಹಾಗೂ ನಾಯಕರು ಕಾರ್ಯಕ್ರಮಕ್ಕೆ ಹೋಗುವಂತೆ ಸಲಹೆ ಕೊಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್ ಶಾಗೆ ಸ್ಟಾಲಿನ್ ಪತ್ರ
Advertisement
Advertisement
ಸಲಹೆಯ ಹಿನ್ನಲೆಯಲ್ಲಿ ಅವರು ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ದೇವೇಗೌಡರ ಜೊತೆ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾಗಿಯಾಗಲಿದ್ದಾರೆ.
Advertisement
Advertisement
ಇದೇ ತಿಂಗಳ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ (Narendra Modi) ಹೊಸ ಸಂಸತ್ ಭವನ ಉದ್ಘಾಟನೆಗೊಳ್ಳಲಿದೆ. ಮೋದಿ ಉದ್ಘಾಟನೆಗೆ ಆಕ್ಷೇಪ ವ್ಯಕ್ತಪಡಿಸಿರುವ 19 ವಿಪಕ್ಷಗಳು ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಸಂಸತ್ ಕಟ್ಟಡವನ್ನು ಲೋಕಾರ್ಪಣೆ ಮಾಡಬೇಕೆಂದು ಆಗ್ರಹಿಸಿವೆ. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್ ಪಾತ್ರ ತಿರುಗೇಟು