ಬೆಂಗಳೂರು: ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ದೂರ ಇದ್ದಾರೆ. ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ ಅಂತಾ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ನನಗೂ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಹತ್ತಿರ ಮಾತಾನಾಡಿದ್ದೀನಿ ಅಂತ ಅವರೇ ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಆದ್ರೆ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ಕ್ರಮ ಕೈಗೊಂಡಿಲ್ಲ ಎಂದರು.
ಜಿ.ಟಿ.ದೇವೇಗೌಡ ಜೊತೆ ನಾನು ರಾಜಕೀಯ ಮಾತನಾಡಿಲ್ಲ. ತಿರುಪತಿಗೆ ಹೋಗಿದ್ದಾಗ ಜಿ.ಟಿ.ದೇವೇಗೌಡ ಸಿಕ್ಕಿದ್ದರು. ಆಗ ನಾನೇ ನೋಡಿ ಕರೆದು ತಮಾಷೆ ಮಾಡಿದ್ದೆ. ನಿನ್ನ ದರ್ಶನ ಇಲ್ಲಿ ಆಯ್ತಲ್ಲಪ್ಪಾ ಎಂದಿದ್ದೆ, ಆಗ ನಿಮ್ಮ ದರ್ಶನ ಆಗಿದ್ದು ಖುಷಿ ಆಯ್ತು ಸರ್ ಅಂದಿದ್ರು ಅಷ್ಟೇ ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ
ಇದೇ ವೇಳೆ ಕೋಲಾರ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಗರಂ ಆದ ಗೌಡರು ಹೆಸರು ಹೇಳದೇ ಕೋಲಾರದ ಶಾಸಕರು ಕಾಂಗ್ರೆಸ್ ಜೊತೆ ಸೇರಿ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ. ಕೋಲಾರ ವಿಚಾರದಲ್ಲಿ ಸಹಿಸಲು ಆಗಲ್ಲ, ಕೀಳಾಗಿ ಮಾತನಾಡಿದ್ದರೆ ಕ್ರಮ ಅನಿವಾರ್ಯವಾಗಿದೆ. ಕ್ರಮ ತೆಗೆದುಕೊಳ್ತಾರೆ ಎಂದು ಹೇಳಿದರು. ಇದನ್ನೂ ಓದಿ: ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ