ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ನಡೆಸಲಿದ್ದು, ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ.
ಪಕ್ಷ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಆಯೋಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಮಂಗಳೂರಿನಲ್ಲಿ ಜೆಡಿಎಸ್ ಪಕ್ಷದ 4 ರಿಂದ 5 ಸ್ಥಾನ ಗೆಲ್ಲುವ ಸಾಧ್ಯತೆ ಇದ್ದು, ಹೀಗಾಗಿ ಅಲ್ಲಿ ಸ್ಪರ್ಧೆ ಮಾಡುತ್ತೇವೆ. ಈ ಹಿಂದೆ ಬಿಜೆಪಿ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದೇವು. ಆದರೆ ಈ ಬಾರಿ ಜೆಡಿಎಸ್ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಚುನಾವಣೆಯ ನಡೆಯುವ ರಾಜ್ಯದ ಎಲ್ಲಾ ಭಾಗದಲ್ಲೂ ಅಗತ್ಯವಿರುವ ಕಡೆ ಮಾತ್ರ ಸ್ಪರ್ಧೆ ಮಾಡುತ್ತೇವೆ. ಈ ಬಗ್ಗೆ ಫಾರೂಖ್‍ರೊಂದಿಗೆ ಚರ್ಚೆ ಮಾಡಿ ಟಿಕೆಟ್ ಫೈನಲ್ ಮಾಡುತ್ತೇವೆ. ಸ್ವತಃ ನಾನೇ ಮಂಗಳೂರು, ಯಾದಗಿರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತೇನೆ. ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಅಗತ್ಯಿವಿರುವ ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಾರೆ ಎಂದರು.
Advertisement
ತೊಂದರೆ ಕೊಟ್ಟರೆ ಸುಮ್ಮನಿರಲ್ಲ: ಇದೇ ವೇಳೆ ಸಿಎಂ ಬಿಎಸ್‍ವೈ ಅವರ ಕಾರಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಯಾದಗಿರಿ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಹಿಂಸೆ ನೀಡಲಾಗುತ್ತಿದೆ. ಸಿಎಂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ನೀಡಿದ ಅನುದಾನವನ್ನು ಕಡಿತ ಮಾಡಿದ್ದ ಪರಿಣಾಮ ಕಾರ್ಯಕರ್ತರು ತೆರಳಿದ್ದರು. ಈ ವೇಳೆ ಸಿಎಂ ತೆರಳುತ್ತಿದ್ದ ಕಾರಣ ಕಾರಿಗೆ ಅಡ್ಡ ಹಾಕಿದ್ದರು ಅಷ್ಟೇ. ಆದರೆ ಇದನ್ನೇ ದೂರು ಮಾಡಿಕೊಂಡು ಪ್ರಕರಣ ದಾಖಲಿಸಿ ಅವರಿಗೆ ಕಾರ್ಯಕರ್ತರಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಅವರಿಗೆ ಧೈರ್ಯ ಹೇಳುವ ಸಾಲುವಾಗಿ ನಾಳೆ ಅಲ್ಲಿಗೆ ಭೇಟಿ ನೀಡುತ್ತಿದ್ದೇನೆ ಎಂದರು.
Advertisement
ಜೆಡಿಎಸ್ ಶಾಸಕರು ಇರುವ 37 ಕ್ಷೇತ್ರದ ಅನುದಾನವನ್ನು ಸಿಎಂ ಯಡಿಯೂರಪ್ಪ ಕಡಿತ ಮಾಡಿದ್ದಾರೆ. ನಾಳೆ ನಾನು ಅಲ್ಲಿಗೆ ಹೋಗಿ ಅವರಿಗೆ ಬೆಂಬಲ ನೀಡುತ್ತೇನೆ. ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಮಾತ್ರ ಸುಮ್ಮನೆ ಇರುವುದಿಲ್ಲ. ನನಗೆ ಹೋರಾಟ ಹೊಸದಲ್ಲ ಎಂದರು. ಇದೇ ವೇಳೆ ರಾಷ್ಟ್ರ ರಾಜಕಾರಣಕ್ಕೆ ಇಂದಿನ ದಿನ ದೇವೇಗೌಡರು ಅನಿವಾರ್ಯತೆ ಇದೆ ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಹೇಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ದೇಶದ ಇಂದಿನ ಬೆಳವಣಿಗೆಗಳ ಕುರಿತು ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಆದರೆ ಮೊದಲು ರಾಜ್ಯದಲ್ಲಿ ನಮ್ಮ ಪಕ್ಷ ಸಂಘಟನೆ ಮಾಡುತ್ತೇನೆ. ಮೊದಲು ರಾಜ್ಯದಲ್ಲಿ ನಮ್ಮ ಪಕ್ಷ ಸಂಘಟನೆ ನನ್ನ ಆದ್ಯತೆ ಎಂದರು.