ಹಾಸನ: ಮೈತ್ರಿ ಪಕ್ಷದ ನಾಯಕರ ವರ್ತನೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ (HD Devegowda) ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ (BJP) ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ- ಆಪರೇಟ್ ಮಾಡ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋ-ಆಪರೇಟ್ ಮಾಡ್ತಿಲ್ಲ. ಸುಮಲತಾ ಪ್ರಚಾರ ಮಾಡದಿದ್ದರೂ ಕುಮಾರಸ್ವಾಮಿಗೆ ಅಪಾಯವಿಲ್ಲ ಎಂದು ಹೇಳಿದರು.
ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತೀನಿ. ಇಂದು ಕಾವೇರಿ ಬೇಸಿನ್‍ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ ಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ (Sumalatha) ಅವರು ಕುಮಾರಸ್ವಾಮಿಗೆ (HD Kumaraswamy) ಕೋ-ಆಪರೇಟ್ ಮಾಡ್ತಿಲ್ಲ. ಅದರಿಂದ ಕುಮಾರಸ್ವಾಮಿ ಏನೋ ಅಪಾಯ ಆಗುತ್ತೆ ಅಂತ ನೀವು ಹೇಳಬಹುದು. ಆದರೆ ಏನೂ ಆಗಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ನೀಡಿದ ಭರವಸೆಗಳಲ್ಲಿ ಎಷ್ಟು ಪೂರ್ಣಗೊಂಡಿದೆ? ಎಷ್ಟು ಪೂರ್ಣಗೊಂಡಿಲ್ಲ?
ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ. ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 140 ಕೋಟಿ ಎನ್‍ಓಸಿ ರಿಲೀಸ್ ಮಾಡಿದ್ದಾರೆ. ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್‍ನವರು ಜಗಳವಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿನೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ ಎಮದು ವಾಗ್ದಾಳಿ ನಡೆಸಿದರು.
ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ರಾಹುಲ್ ಗಾಂಧಿ ಹೇಳ್ತಾರೆ. ಕಾವೇರಿ ಬೇಸಿನ್‍ಗೆ ಸಂಬಂಧಪಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನಮಂತ್ರಿಗಳ ಜೊತೆ ಎರಡು ಸಭೆ ಮಾಡಿದ್ದೇನೆ. ಎರಡನೇ ಹಂತದ ಚುನಾವಣೆ ಹೈದರಾಬಾದ್, ಕರ್ನಾಟಕ, ಮುಂಬೈ ಕರ್ನಾಟಕ ಮೇ.7 ರಂದು ನಡೆಯಲಿದೆ. ಶಿವಮೊಗ್ಗ ಸೇರಿ ಎರಡನೇ ಹಂತದ ಚುನಾವಣೆ ನಡೆಯುತ್ತದೆ.