– ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಮಾತಾಡೋಕಾಗಲ್ಲ ಎಂದ ಗೌಡರು
– ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೆ ಎಂದ ವಿಜಯೇಂದ್ರ
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance), ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ (JDS) ಭವನದಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಜನವರಿ 23 ರಂದು, ಬೆಂಗಳೂರಿನಲ್ಲಿ ಜನವರಿ 18 ರಂದು ಸಭೆ ಮಾಡ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡ್ತೇವೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಜೊತೆಗೆ ಇರುತ್ತೇವೆ. ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ 3 ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರನ್ನ ತಾಲ್ಲೂಕು ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲು ಮುಂದಾದ ಆರೋಗ್ಯ ಇಲಾಖೆ
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra), ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. ಬಿಜೆಪಿಯನ್ನ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಂಕಲ್ಪ ಮಾಡಬೇಕಾಗಿದೆ. ರಾಜ್ಯಾಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ – ದಿನೇಶ್ ಗುಂಡೂರಾವ್
ಮುಂದೆ.. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಅಂತೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಈ ನಡುವೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ, ವಿಜಯೇಂದ್ರಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ವಿಜಯೇಂದ್ರ ಬಹಳ ಉತ್ಸಾಹದಿಂದ ಓಡಾಡುತ್ತಿದ್ದಾರೆ. ಯಂಗ್ ಸ್ಟಾರ್ ರೀತಿ ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.
ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ ಮಾಡಲು ಆಗಲ್ಲ. ಮೋದಿ, ಶಾ ಜೊತೆಗೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡ್ತೀವಿ ಅಂತೇಳುವ ಮೂಲಕ ಮೈತ್ರಿ ಇದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಕತ್ತು ಸೀಳಿ ಸ್ಟಾಫ್ ನರ್ಸ್ ಹತ್ಯೆ; ಮದುವೆ ಮಾಡಿಕೊಳ್ಳುವಂತೆ ಪೀಡಿಸುತ್ತಿದ್ದಕ್ಕೆ ಪ್ರಿಯಕರನಿಂದ ಕೊಲೆ


