ಹಾಸನ: ಅಂದು ಒಕ್ಕಲಿಗ ಸಮುದಾಯಕ್ಕೆ (Vokkaliga Community) ನೀಡಿದ್ದ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಂ (Muslims) ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಹೇಳಿಕೊಂಡಿದ್ದಾರೆ.
ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಗೌಡರು, ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಈಗ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಈ ಕೆಲಸವನ್ನು ನಾನೂ ನನ್ನ ಅಧಿಕಾರ ಅವಧಿಯಲ್ಲೇ ಮಾಡಿದ್ದೆ. ಅಂದು ಮುಸ್ಲಿಮರಿಗೆ ಮೀಸಲಾತಿ (Muslims Reservation) ಕೊಟ್ಟಿದ್ದು ದೇವೇಗೌಡ. ನಾನು ಅಧಿಕಾರದಲ್ಲಿದ್ದಾಗ ಒಕ್ಕಲಿಗರಿಗೆ ನೀಡಿದ್ದನ್ನು ಕಡಿಮೆ ಮಾಡಿ, ಮುಸ್ಲಿಮರಿಗೆ ಮೀಸಲಾತಿ ಕೊಟ್ಟೆ. ಇದನ್ನು ನಿರ್ಣಯ ಮಾಡಿದ್ದು ದೇವೇಗೌಡ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಅಗ್ನಿ ಪರೀಕ್ಷೆ; ಚುನಾವಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸುಪ್ರೀಂನಲ್ಲಿ ಇಂದು ವಿಚಾರಣೆ
ಗುಂಡೂರಾವ್ ಸರ್ಕಾರದಲ್ಲಿ ಅಂಬೇಡ್ಕರ್ ಅವರು ನೀಡಿದ್ದ 18% ಮೀಸಲಾತಿಯಲ್ಲಿ ಎಸ್ಸಿಗೆ 15%, ಎಸ್ಟಿಗೆ 3% ನೀಡಿದ್ದರು. ಆದ್ರೆ ಆ ಕೋಟಾ ಭರ್ತಿ ಮಾಡಲಿಲ್ಲ. ನಂತರ ನಾನು 1983ರಲ್ಲಿ ಲೋಕೋಪಯೋಗಿ ಸಚಿವನಾದಾಗ ಅಂಬೇಡ್ಕರ್ ಕೊಟ್ಟಂತಹ ಕೋಟಾ ಭರ್ತಿಯಾಗಲು 15% ಮೀಸಲಾತಿಯನ್ನು 18%ಗೆ ಹೆಚ್ಚಿಸಿದೆ. 3% ಇದ್ದ ಎಸ್ಟಿ ಮೀಸಲಾತಿಯನ್ನು 5%ಗೆ ಹೆಚ್ಚಿಸಿದೆ. ಅಂಬೇಡ್ಕರ್ ಅವರ ಆಶಯದಂತೆ ಆ ಕೋಟಾ ಗುರಿಮುಟ್ಟುವವರೆಗೂ ಕೆಲಸ ಮಾಡಿದ್ದೇನೆ. ಅದು ಖಾಯಂ ಆಗಿರಬೇಕು ಅಂತ ಮಾಡಿದ್ದೆ. ಇದು ಎಲ್ಲಾ ಇಲಾಖೆಗಳ ಮೇಲೆ ಪರಿಣಾಮ ಬೀರುತ್ತೆ ಅಂತ ಎಲ್ಲರೂ ಹೇಳಿದ್ರು, ಆದರೂ ನಾನು ಮೀಸಲಾತಿ ಹೆಚ್ಚಿಸಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಇವತ್ತು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ಅಹಿಂದ ಅಹಿಂದ ಅಂತ ಹೇಳಿದ್ದೇ, ಹೇಳಿದ್ದು, ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಮಾಡಿಬಿಟ್ಟರು. ಏಕೆಂದರೆ ನಾನೊಬ್ಬ ಒಕ್ಕಲಿಗ ಅದಕ್ಕೆ ಮಾಡಿದ್ರು, ಬೇಕಿದ್ದರೆ ಇದೆಲ್ಲದರ ಬಗ್ಗೆ ಚರ್ಚೆಯಾಗಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಮತ್ತೊಂದು ದಾಖಲೆ ಬರೆದ ಕಾಟೇರ: 200 ಕೋಟಿ ರೂ. ಕ್ಲಬ್ ಸೇರಿದ ಸಂಭ್ರಮ
ನಾನು ಪ್ರಧಾನಿಯಾಗಿದ್ದಾಗ ನಮ್ಮ ಸರ್ಕಾರವನ್ನು ತೆಗೆದುಹಾಕಿದ್ದು ಯಾರು? ಕುಮಾರಸ್ವಾಮಿ ಸರ್ಕಾರವನ್ನ ಬೀಳಿಸಿದ್ದು ಯಾರು? ನನ್ನನ್ನ ಪ್ರಧಾನ ಮಂತ್ರಿ ಸ್ಥಾನದಿಂದ ತೆಗೆದುಹಾಕಿದ್ದು ಯಾರು? 60 ವರ್ಷ ರಾಜಕೀಯ ಹೋರಾಟ ಮಾಡಿದ್ದೇನೆ. ಈ ವಿಷಯ ರಾಜ್ಯಾದ್ಯಂತ ಚರ್ಚೆ ಆಗಬೇಕು. 1995 ರಲ್ಲಿ ನಾನು ನಿರ್ಣಯ ಮಾಡಿದ್ದೆ, ಇವತ್ತು ಒಳಮೀಸಲಾತಿ ಜಾರಿ ಮಾಡಲು ಹೊರಟಿದ್ದಾರೆ. ಇದನ್ನೇ ಈ ಚುನಾವಣೆಯಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು