– 2050ರ ವೇಳೆಗೆ ಇಂಧನ ಬೇಡಿಕೆ ಪ್ರಮಾಣ 400% ಹೆಚ್ಚಾಗಲಿದೆ
– ಮೋದಿ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಆರೋಪ ಇಲ್ಲವೆಂದ ಗೌಡರು
ನವದೆಹಲಿ: ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ನವೀಕರಿಸಬಹುದಾದ ಇಂಧನ ಶಕ್ತಿಯನ್ನು (Renewable Energy) ಕಡೆಗಣಿಸುತ್ತಿವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD DeveGowda) ಅವರು ಬೇಸರ ಹೊರಹಾಕಿದರು.
Advertisement
ನವೀಕರಿಸಬಹುದಾದ ಇಂಧನ ಶಕ್ತಿಗಳ ಬಗ್ಗೆ ರಾಜ್ಯಸಭೆಯಲ್ಲಿಂದು (Rajya Sabha) ಮಹತ್ವದ ಭಾಷಣ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಈ ಕ್ಷೇತ್ರವನ್ನು ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ಕಡೆಗಣಿಸುತ್ತಿವೆ ಎಂದರು. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: Paris Olympics 2024: ಲಕ್ಷ್ಯ ಸೇನ್‌ಗೆ ಸೋಲು – ಕಂಚು ಗೆಲ್ಲುವ ಕನಸು ಭಗ್ನ; ಭಾರತಕ್ಕೆ ಮತ್ತೆ ನಿರಾಸೆ!
Advertisement
ಹಿಂದೆ ಕರ್ನಾಟಕ ರಾಜ್ಯವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ನಾಯಕತ್ವ ನೀಡಿತ್ತು. ಈ ಕ್ಷೇತ್ರದಲ್ಲಿ ಗಣನೀಯ ದಾಪುಗಾಲು ಇರಿಸಿತ್ತು. ಆದರೆ ಕೆಲ ವರ್ಷಗಳಿಂದ ಈಚೆಗೆ ಕರ್ನಾಟಕದಲ್ಲಿ ಈ ಕ್ಷೇತ್ರ ಗಣನೀಯವಾಗಿ ಹಿನ್ನೆಡೆ ಅನುಭವಿಸಿದೆ. ನಮ್ಮ ದೇಶದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಬೆಳವಣಿಗೆ ಪ್ರಮಾಣ ಶೇ.14ರಷ್ಟು ಇದ್ದು, ಕರ್ನಾಟಕ ರಾಜ್ಯದಲ್ಲಿ ಆ ಪ್ರಮಾಣ ಶೇ.2.58ರಷ್ಟು ಇದೆ. ಈ ಸಂದರ್ಭದಲ್ಲಿ ಈ ಕ್ಷೇತ್ರದ ಬೆಳವಣಿಗೆಯ ದರ ಕುಂಠಿತವಾಗಿರುವ ಬಗ್ಗೆ ಎಲ್ಲರೂ ಗಂಭೀರ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.
Advertisement
Advertisement
ಈ ಕ್ಷೇತ್ರದಲ್ಲಿ ಉಂಟಾಗುವ ತ್ಯಾಜ್ಯ ವಸ್ತುಗಳ ಬಗ್ಗೆಯೂ ಮಹತ್ವದ ಸಲಹೆ ನೀಡಿದ ಮಾಜಿ ಪ್ರಧಾನಿಗಳು, ಸೋಲಾರ್ ಪ್ಯಾನಲ್‌ಗಳನ್ನು 25 ವರ್ಷಗಳ ಬಳಿಕ ವಿಲೇವಾರಿ ಮಾಡಲೇಬೇಕಾಗುತ್ತದೆ. ಅವುಗಳನ್ನು ವಿಲೇವಾರಿ ಮಾಡುವ ಬಗ್ಗೆ ನಮ್ಮ ದೇಶದಲ್ಲಿ ಯಾವುದೇ ರೀತಿಯ ವೈಜ್ಞಾನಿಕ ನೀತಿ ಇರುವುಲ್ಲ. ಸೋಲಾರ್ ಪ್ಯಾನಲ್‌ಗಳ ವಿಲೇವಾರಿಯಲ್ಲಿ ನಾವು ಅತ್ಯಂತ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೇ ಭವಿಷ್ಯದಲ್ಲಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ, ಅವುಗಳ ವಿಲೇವಾರಿಗೆ ವೈಜ್ಞಾನಿಕ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ‘ಸ್ವಾತಿಮುತ್ತೇ ಸಿಕ್ಕಂಗೈತೆ’ ಎಂದು ಜ್ಯೂ.ಎನ್‌ಟಿಆರ್ ಜೊತೆ ಹೆಜ್ಜೆ ಹಾಕಿದ ಜಾನ್ವಿ ಕಪೂರ್
ಪರಿಸರ ಸಂರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ನವೀಕರಿಸಬಹುದಾದ ಇಂಧನ ಶಕ್ತಿಯಿಂದ ನಮ್ಮ ಪರಿಸರ ಹಾಗೂ ಜೀವ ವೈವಿಧ್ಯತೆ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆಯೂ ಅತ್ಯಂತ ಮುನ್ನೆಚ್ಚರಿಕೆ ವಹಿಸಬೇಕು. ಸೋಲಾರ್ ಪ್ಯಾನೆಲ್‌ಗಳನ್ನ ಇದೀಗ ಕೃಷಿ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಳವಡಿಸಲಾಗುತ್ತಿದೆ. ಭವಿಷ್ಯದಲ್ಲಿ ಇವುಗಳನ್ನು ಕೃಷಿ ಯೋಗ್ಯವಲ್ಲದ ಪ್ರದೇಶಗಳಲ್ಲಿ ಅಳವಡಿಸಲು ಯೋಜನೆಗಳನ್ನು ರೂಪಿಸಬೇಕು ಎನ್ನುವುದು ನನ್ನ ಕಳಕಳಿಯ ಸಲಹೆಯಾಗಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ನಮ್ಮ ಹೋರಾಟದ ಬಿಸಿಗೆ ಕಾಂಗ್ರೆಸ್ ಸರ್ಕಾರ ಒಂಟಿ ಕಾಲಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ
ಸದ್ಯದ ಸಂದರ್ಭದಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ನಾವು ಕೇವಲ ಇದನ್ನಷ್ಟೆ ಮಾಡಿದರೆ ಸಾಲದು. ಅವುಗಳ ಅಳವಡಿಕೆ, ಬಳಕೆ, ನಿರ್ವಹಣೆ ಪರಿಣಾಮಕಾರಿ ವ್ಯವಸ್ಥೆ ಅತ್ಯಗತ್ಯವಿದೆ. ಈ ಬಗ್ಗೆ ಸರ್ಕಾರ ಗಮನ ಕೊಡಬೇಕು. ನವೀಕರಿಸಬಹುದಾದ ಇಂಧನಕ್ಕೆ ಇನ್ನಷ್ಟು ಒತ್ತು ನೀಡಿ ಗ್ರಾಮೀಣ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ಸಮಗ್ರ ನೀತಿ ರೂಪಿಸಬೇಕು ಎಂದು ಎಚ್ಚರಿಸಿದರು.
ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಪರಿಣಾಮಕಾರಿ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕಾರ್ಯವೈಖರಿ ಬಗ್ಗೆ ದೇವೇಗೌಡರು ಮೆಚ್ಚುಗೆ ಮಾತುಗಳನ್ನಾಡಿದರು. ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಕ ಅಭಿವೃದ್ಧಿ ಆಗಿದೆ. ಈ ಸರ್ಕಾರದ ವಿರುದ್ಧ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ ಎಂಬುದನ್ನು ನಾವು ಗಮನಿಸಬೇಕು ಎಂದು ಅವರು ಹೇಳಿದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ, ಕಾಂಗ್ರೆಸ್ಸಿಗನಾಗಿ ನಾನೇ ಕೈಮುಗಿದು ಧನ್ಯವಾದ ಹೇಳ್ತೀನಿ: ಕೃಷ್ಣಬೈರೇಗೌಡ
ಹಸಿರು, ಶುದ್ಧ ಇಂಧನದ ಅಗತ್ಯವಿದೆ:
ಪರಿಸರ ರಕ್ಷಣೆ ಮಾಡಿಕೊಂಡು ಹಸಿರು ಹಾಗೂ ಶುದ್ಧ ಇಂಧನದ ಬಳಕೆಯಿಂದ ದೇಶದ ಸುಸ್ಥಿರ ಅಭಿವೃದ್ಧಿಯಾಗಲು ಸಾಧ್ಯ. ಇದಕ್ಕೂ ಮುನ್ನ ಜಲ ವಿದ್ಯುತ್, ಆ ನಂತರ ಸೌರ ವಿದ್ಯುತ್, ಪವನ ವಿದ್ಯುತ್ ಶಕ್ತಿಗಳಿಗೆ ಪ್ರೋತ್ಸಾಹ ಕೊಡಲಾಯಿತು. ಸದ್ಯದ ಸಂದರ್ಭದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಮಹತ್ವ ಕೊಡುವುದು ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಈಗ 1,000 ಗಿಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ 30 ಪಟ್ಟು ಹೆಚ್ಚಳವಾಗಿದೆ. ಆದರೂ, ಇಂಧನ ಕ್ಷೇತ್ರದಲ್ಲಿ ಕೆಲವೊಂದು ಆತಂಕಗಳು ಇದ್ದೇ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಮಾಜಿ ಪ್ರಧಾನಿಗಳು ಸವಿಸ್ತಾರವಾಗಿ ಹೇಳಿದರು.
ಇಂಧನ ಬೇಡಿಕೆ ಪ್ರಮಾಣ 400% ಹೆಚ್ಚಾಗಲಿದೆ:
ಇಡೀ ಜಗತ್ತಿನಲ್ಲಿಯೇ ಭಾರತವು ಇಂಧನ ಬಳಕೆಯಲ್ಲಿ 3ನೇ ಸ್ಥಾನದಲ್ಲಿದೆ. ಈಗಲೂ ಶೇ.80ರಷ್ಟು ಪಳೆಯುಳಿಕೆ ಇಂಧನಗಳನ್ನೇ ಬಳಸುತ್ತಿದ್ದೇವೆ. ನವೀಕರಿಸಬಹುದಾದ ಇಂಧನಗಳ ಪಾಲು ಶೇ.20ರಷ್ಟು ಮಾತ್ರ ಎಂದು ಟೆರಿ ವರದಿಯಲ್ಲಿ ಬೊಟ್ಟು ಮಾಡಿ ತೋರಿಸಲಾಗಿದೆ. 2050ರ ವೇಳೆಗೆ ಇಂಧನ ಬೇಡಿಕೆ ಪ್ರಮಾಣ ಶೇ.400ರಷ್ಟು ಹೆಚ್ಚಳವಾಗಲಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಈ ಸಲದ ಬಜೆಟ್‌ನಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ವಿಶೇಷ ಒತ್ತಾಸೆ ನೀಡಲಾಗಿದೆ ಎಂದರು.
ಹಲವಾರು ರಾಜ್ಯಗಳು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿವೆ ಎಂಬುದು ಗಮನಾರ್ಹ. ಇನ್ನು ಕೆಲ ರಾಜ್ಯಗಳಲ್ಲಿ ಈ ಕ್ಷೇತ್ರದ ಪ್ರಗತಿ ಏನೇನೂ ಸಾಲದು ಎನ್ನುವುದು ನನ್ನ ಅಭಿಪ್ರಾಯ. ಇಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸಲು ಗಮನ ಹರಿಸಬೇಕು ಎಂದು ಗೌಡರು ಹೇಳಿದರು.
ಕೃಷಿ ಕ್ಷೇತ್ರದಲ್ಲಿ ರೈತರು ಅನುಭವಿಸುತ್ತಿರುವ ಕಷ್ಟಗಳ ಅರಿವು ನನಗಿದೆ. ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿದ್ದಾಗ ಕೃಷಿಕರ ಕಲ್ಯಾಣಕ್ಕೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾಗ ಗಂಗಾ ಕಲ್ಯಾಣ ಯೋಜನೆಯನ್ನು ನಾನೇ ಜಾರಿ ಮಾಡಿದೆ ಎಂದು ಮಾಜಿ ಪ್ರಧಾನಿಗಳು ನೆನಪು ಮಾಡಿಕೊಂಡರು.