ಮಂಡ್ಯ: ಕೊತ್ವಾಲ್ ರಾಮಚಂದ್ರನ ಬಳಿ 100 ರೂಪಾಯಿಗೆ ಕೆಲಸ ಮಾಡ್ತಾ ಇದ್ದ ಡಿ.ಕೆ ಶಿವಕುಮಾರ್ (DK Shivakumar) ಕಣ್ಣೀರು ಹಾಕಿರೋದು ಯಾವತ್ತಾದರೂ ನೋಡಿದ್ದೀರಾ? ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಅವರು ಪ್ರಶ್ನೆ ಮಾಡಿದರು.
ಮಂಡ್ಯದ (Mandya) ಚಿನಕುರುಳಿ ಗ್ರಾಮದಲ್ಲಿ ಮಾತನಾಡಿದ ದೇವೇಗೌಡರು, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಜವಹಾರ್‌ಲಾಲ್ ನೆಹರು, ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಯಾವತ್ತಾದ್ರೂ ಜನರಿಗಾಗಿ ಕಣ್ಣೀರು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
ದೇಶಕ್ಕೆ ಅನ್ನಕೊಡುವ ರೈತನಿಗೆ ನೋವಾದಾಗ ಹೃದಯ ಮರುಗುತ್ತೆ ಅಂತವರಿಗೆ ಕಣ್ಣೀರು ಬರುತ್ತದೆ. ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೆ ಕಣ್ಣೀರು ಹಾಕುತ್ತದೆ ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ. ಯಾರು ಹೇಮಾವತಿ, ಹಾರಂಗಿ ಕಟ್ಟಿದ್ದು? ಚನ್ನಪಟ್ಟಣದಲ್ಲಿ ಈಗ ಚರ್ಚೆ ಮಾಡ್ತಾರೆ. ಮಾತಡೋಕೆ ತುಂಬಾ ವಿಚಾರಗಳು ಇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ