ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ, ಮತ್ತೆ ಪಾರ್ಲಿಮೆಂಟ್‍ಗೆ ಕರೆದೊಯ್ತೇವೆ: ರೇವಣ್ಣ

Public TV
1 Min Read
HD DEVEGOWDA HD REVANNA

ಹಾಸನ: ಮಾಜಿ ಪಿಎಂ ಹೆಚ್.ಡಿ ದೇವೇಗೌಡ (HD Devegowda) ರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.

ಕಾಂಗ್ರೆಸ್‍ (Congress) ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು. ಇದನ್ನೂ ಓದಿ: ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಹಲ್ಲೆ ಆರೋಪಕ್ಕೆ ಟ್ವಿಸ್ಟ್ – ಉಲ್ಟಾ ಹೊಡೆದ ಆಟೋ ಚಾಲಕ

ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣ (Prajwal Revanna) ನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.

Share This Article