ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
2 ಪುಟಗಳ ಪತ್ರ ಬರೆದಿರುವ ಎಚ್‍ಡಿಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ರೈತರು ಕೂಡ ಈಗ ಬೀದಿಗೆ ಬೀಳುವಂತಾಗಿದೆ. ಹಣ್ಣು, ತರಕಾರಿ, ಹೂವು ಬೆಳೆಗಾರರ ನೆರವಿಗೆ ಬರಬೇಕು. ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟ ಅನುಭವಿಸುತ್ತಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಇಲ್ಲವಾದಲ್ಲಿ ಅವರು ಜಮೀನು ಮಾರುವ ಸ್ಥಿತಿ ಬರುತ್ತದೆ. ಹೀಗಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಮನವಿ ಮಾಡಿದ್ದಾರೆ.
Advertisement
ಲಾಕ್ ಡೌನ್ ನಿಂದಾಗಿ ಹಣ್ಣು, ತರಕಾರಿ, ಹೂವು ಬೆಳೆದು ನಷ್ಟಕ್ಕೊಳಗಾಗಿರುವ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೋರಿ ಮಾನ್ಯ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ.@BSYBJP @CMofKarnataka pic.twitter.com/77kqCKqHFX
— H D Devegowda (@H_D_Devegowda) April 27, 2020
Advertisement
ಕೊರೊನಾ ವಿರುದ್ಧ ಹೋರಾಟದಲ್ಲಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳಿಗೆ ನಮ್ಮ ಪಕ್ಷದಿಂದಲೂ ಸಹಕಾರ ಇದೆ. ರಾಜ್ಯದಲ್ಲಿ ಲಾಕ್‍ಡೌನ್ 1 ತಿಂಗಳು ಮುಟ್ಟಿದೆ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಲಾಕ್‍ಡೌನ್‍ನಿಂದ ರೈತಾಪಿ ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ರೈತರಿಗೆ ಉಂಟಾಗಿರುವ ನಷ್ಟವನ್ನು ಗಮಿಸಿ ಇಲಾಖೆಯ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟಗೊಂಡಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.