ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಕುರಿತ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಫೋನ್ ಕದ್ದಾಲಿಕೆ ಕುರಿತ ವಿಚಾರಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಎಚ್‍ಡಿಕೆ, ಯಾರ ಮನೆ ಮೇಲಾದರೂ ದಾಳಿ ನಡೆಯಲಿ. ನನ್ನನ್ನು ಯಾಕೆ ಕೇಳುತ್ತೀರಿ. ಅದಕ್ಕೂ ನನಗೂ ಏನು ಸಂಬಂಧ? ಎಲ್ಲರ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ನಡೆದಿದೆ. ಯಾರ ಯಾರ ಅವಧಿಯಲ್ಲಿ ಹೇಗೆ ನಡೆಸಿದ್ದಾರೆ ಎಂದು ತನಿಖೆ ನಡೆಸುತ್ತಿದ್ದಾರೆ. ಅದಕ್ಕೆ ನಾನು ಏಕೆ ತಲೆ ಕೆಡಿಸಿಕೊಳ್ಳಲಿ ಎಂದರು.
Advertisement
Advertisement
ಈಗಲೂ ನಾನು ಹೇಳುತ್ತಿದ್ದೇನೆ. ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರು ದಕ್ಷ ಅಧಿಕಾರಿಯಾಗಿದ್ದಾರೆ. ಪ್ರಕರಣದಲ್ಲಿ ನನ್ನ ಮನೆಗೂ ವಿಚಾರಣೆಗೆ ಬಂದರೆ ಬರಲಿ. ದೇಶದ ಕಾನೂನು ವ್ಯವಸ್ಥೆಯ ಅಡಿ ಯಾರನ್ನು ಬೇಕಾದರು ತನಿಖೆ ಮಾಡಬಹುದು. ಇದಕ್ಕೆ ಗಾಬರಿ ಪಡುವ ಅಗತ್ಯವಿಲ್ಲ ಎಂದರು.
Advertisement
ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ಇಂದು ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಸಿದರು. ಜೆಡಿಎಸ್ ವರಿಷ್ಠರಾದ ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15 ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ನಿರ್ಧಾರವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳ ಮುಖಂಡರ ಸಭೆ ಮಾಡಿ ಅಭ್ಯರ್ಥಿಗಳನ್ನ ಕುಮಾರಸ್ವಾಮಿ ಫೈನಲ್ ಮಾಡಿದ್ದು, ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಮಂಡಿಸಿ ಚರ್ಚೆ ಮಾಡಿ ಅಂತಿಮವಾಗಿ ಅಭ್ಯರ್ಥಿ ಗಳನ್ನ ಘೋಷಣೆ ಮಾಡಲಾಗುತ್ತೆ ಎಂಬ ಮಾಹಿತಿ ಲಭಿಸಿದೆ.