ಶಿವಮೊಗ್ಗ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.
Advertisement
ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಗೌಡರ ಪುತ್ಥಳಿ ಅನಾವರಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಅವರ ಹೆಸರು ಹೇಳೋಕೆ ಬೇಜಾರಾಗುತ್ತೆ – ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ
Advertisement
ಇದೇ ತಿಂಗಳ 27 ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದು, ನಿರ್ಧಾರ ಮಾಡ್ತೇವೆ. 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರವನ್ನು ಮಾಡುತ್ತಿದ್ದೇವೆ. ಅಲ್ಲಿ ಎಲ್ಲ ವಿಷಯವನ್ನು ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಚರಂಡಿ ನೀರು ಮೈಮೇಲೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ
Advertisement
ದೇವಾಲಯಗಳ ತೆರವು ಕುರಿತು ಮಾತನಾಡಿದ ಅವರು, ಬಿಜೆಪಿ ಹಿಂದೂಗಳ ಭಾವನೆಗೆ ಬೆಲೆಕೊಡಬೇಕಾಗಿತ್ತು. ಅದು ಅಲ್ಲದೇ ಹಿಂದೂತ್ವದ ಹೆಸರು ಹೇಳಿ ಅವರು ಸರ್ಕಾರಕ್ಕೆ ಬಂದಿದ್ದರು. ಅವರ ಸರ್ಕಾರ ಇರಬೇಕಾದರೆ ದೇವಾಲಯಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ಅವರು ಈ ನಡೆ ತೆಗೆದುಕೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿತ್ತು. ಆದರೆ ಅವರು ಅದರಲ್ಲಿ ಎಡವಿದ್ದಾರೆ ಎಂದು ಹೇಳಿದ್ದಾರೆ.