ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ (Economic Affairs Committee) ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು (H.D Kumaraswamy) ಸ್ಥಾನ ಪಡೆದಿದ್ದಾರೆ.
ಸಮಿತಿಯಲ್ಲಿ ಹೆಚ್‍ಡಿಕೆ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈ ಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಸಹ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಹುತಾತ್ಮ ಅಗ್ನಿವೀರ್ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ 8 ವಿವಿಧ ಸಂಪುಟ ಸಮಿತಿಗಳನ್ನು ಕೆಂದ್ರ ಸರ್ಕಾರ ರಚನೆ ಮಾಡಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಪೊಲೀಸರ ಮುಂದೆ ಬಾಯ್ಬಿಟ್ಟ ವಿದ್ಯಾರ್ಥಿ