ಬೆಂಗಳೂರು: ಪ್ರಧಾನ ಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಹಾರ ಕೇಳಲು ನಿಮಗೆ ಧೈರ್ಯ ಇಲ್ಲ ಎಂದಾದರೆ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಟ್ವೀಟ್: ಮಾನ್ಯ ಬಿ.ಎಸ್.ಯಡಿಯೂರಪ್ಪನವರೇ ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ. ಉತ್ತರ ಕರ್ನಾಟಕ ಭಾರತಲ್ಲಿಯೇ ಬರುತ್ತದೆ ಎಂದು ಹೇಳಿ ಹ್ಯಾಶ್ ಟ್ಯಾಗ್ ಬಳಸಿದ್ದಾರೆ. #NorthKarnatakaBelongsToIndia
Advertisement
ಮಾನ್ಯ @BSYBJP ಅವರೇ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ.#NorthKarnatakaBelongsToIndia
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 27, 2019
Advertisement
ಮಳೆಯಿಂದ ಹಾನಿಯಾದರೂ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ, ಇಲ್ಲಿಗೆ ಬಂದು ಏನು ಮಾಡುತ್ತೀರಿ, ಯಡಿಯೂರಪ್ಪನವರೇ ನೀವು ಇಲ್ಲಿಗೆ ಬರಬೇಡಿ ಎಂದು ರಾಯಚೂರು ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದದ ಗ್ರಾಮಸ್ಥರು ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯಡಿಯೂರಪ್ಪನವರೇ ನೀವಿಲ್ಲಿಗೆ ಬರಬೇಡಿ. ನಾವಿನ್ನೂ ಸತ್ತಿಲ್ಲ, ಬದುಕಿದ್ದೇವೆ. ಮನೆಯಲ್ಲಿ ಅಕ್ಕಿ, ಜೋಳ ಇವೆ ಖರ್ಚಿಗೆ 500ರೂ. ಇದೆ. ಇನ್ನೂ ನಾಲ್ಕು ದಿನ ಮಳೆ ಬಂದರೂ ನಮಗೆ ಏನೂ ಆಗುವುದಿಲ್ಲ ತಲೆಕೆಡಿಸಿಕೊಳ್ಳಬೇಡಿ. ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೀರಿ ಅಧಿಕಾರ ನಡೆಸಿ, ಇಲ್ಲಿಗೆ ಬರಲು ಹೋಗಬೇಡಿ, ನಾವು ಹೇಗಾದರೂ ಹಾಳಾಗಿ ಹೋಗಲಿ, ನೀವು ಮಾತ್ರ ಇಲ್ಲಿಗೆ ಬರಬೇಡಿ. ಇನ್ನೂ ನಾಲ್ಕು ದಿನ ಮಳೆ ಬಂದರೂ ಏನೂ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳು ಜಲಾವೃತಗೊಂಡಿವೆ. ಯಾಪಲದಿನ್ನಿ ಸೋಲಾರ್ ಪ್ಲಾಂಟ್ ಬಳಿ ರಸ್ತೆ ಬಂದ್ ಆಗಿದೆ. ಜಮೀನಿಗೆ ನೀರು ನುಗ್ಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಹೀಗಿದ್ದರೂ ಸಹ ಸರ್ಕಾರದಿಂದ ಒಂದು ರೂಪಾಯಿ ಬಿಡಿಗಾಸೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳು ಇತ್ತ ತಿರುಗಿ ಸಹ ನೋಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.