ಬೆಂಗಳೂರು: ಈಗ ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥಹದ್ದೇ ಪಕ್ಷದಲ್ಲಿ ಇರುತ್ತಾರೆ ಎಂದು ಊಹೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಿಎಂ ಇಬ್ರಾಹಿಂ ಜೆಡಿಎಸ್‍ಗೆ ಸೇರುವ ವಿಚಾರ ಅವರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಅವರು ರಾಜ್ಯ ಪ್ರವಾಸ ಮಾಡಿದ್ದಾರೆ. ಕಾಂಗ್ರೆಸ್ ಬಿಟ್ಟಿದ್ದೇನೆ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ನಿನ್ನೆ ಮಾತನಾಡಿದ್ದಾರೆ. ಮುಂದೆ ನೋಡೋಣ ಏನಾಗುತ್ತದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್
ಉತ್ತರ ಪ್ರದೇಶ, ಗೋವಾ, ಪಂಜಾಬ್‍ನಲ್ಲಿ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ ಒಂದು ಪಾರ್ಟಿಲಿ ಇರುತ್ತಾರೆ. ಸಂಜೆ ಇನ್ನೊಂದು ಪಾರ್ಟಿಗೆ ಹೋಗುತ್ತಾರೆ. ಇಂದು ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥಹದ್ದೇ ಪಕ್ಷದಲ್ಲಿ ಇರುತ್ತಾರೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ನೋಡೋಣ ಚುನಾವಣೆ ಸಮಯದಲ್ಲಿ ಏನಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದೇ ವೇಳೆ ಮಂಡ್ಯದಲ್ಲಿ ಶಿವರಾಮೇಗೌಡರು ಅವರ ದೂರವಾಣಿ ರೆಕಾರ್ಡ್ ವೈರಲ್ ಆಗಿರುವ ಬಗ್ಗೆ ಮಾತನಾಡಿದ ಅವರು, ಶಿವರಾಮೇಗೌಡರು ಸಂಬಂಧ ಇಲ್ಲದೇ ಇರುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ ದಿ.ಮಾದೇಗೌಡರ ವಿಚಾರದಲ್ಲಿ ಮಾತನಾಡಿದ್ದಾರೆ. ನಮಗೆ ಅವರಿಗೆ ರಾಜಕೀಯ ಬೇರೆ. ಅವರು ಈಗ ಇಲ್ಲ. ಆದರೆ ಅವರ ಹೆಸರು ಯಾಕೆ ತಂದಿದ್ದಾರೋ ಗೊತ್ತಿಲ್ಲ. ಅವರ ವೈಯಕ್ತಿಕ ಹೀಗೆ ಹಲವಾರು ವಿಚಾರ ಬಗ್ಗೆ ಮಾತನಾಡಿದ್ದಾರೆ. ಇದು ಸಹಿಸಲು ಸಾಧ್ಯವಿಲ್ಲ. ನಮ್ಮ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ. ನೋಟೀಸ್ ಕೊಟ್ಟು ಪಕ್ಷದಿಂದ ಹೊರ ಹಾಕಿ ಅಂತ ತಿಳಿಸಿದ್ದಾರೆ. ಅಂತವರು ಪಕ್ಷದಲ್ಲಿ ಇದ್ದರೆ ಶೋಭೆ ತರುವುದಿಲ್ಲ. ಹಣ ಇವರೊಬ್ಬರೇ ಕಂಡಿಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಹಣ ಖರ್ಚು ಮಾಡಿದ್ದು ಹೇಳಿದ್ದಾರೆ. 30 ಕೋಟಿ ಖರ್ಚು ಮಾಡಿರುವುದನ್ನು ಹೇಳಿದ್ದಾರೆ. ಅದ್ಯಾರಿಗೆ ಕೊಟ್ಟಿದ್ದಾರೋ ಗೊತ್ತಿಲ್ಲ ಅಂತ ಕಿಡಿಕಾರಿದ್ದಾರೆ.
ಮಾದೇಗೌಡರ ಬಗ್ಗೆ ಮಾತನಾಡಿದ್ದು ಸರಿಯಲ್ಲ. ಅವರು ಈಗ ನಮ್ಮ ಮುಂದೆ ಇಲ್ಲ. ಇಲ್ಲದ ಸಮಯದಲ್ಲಿ ಈ ರೀತಿ ಪದಬಳಕೆ ಮಾಡಿರುವುದು ಸರಿಯಲ್ಲ. ಎಲ್ಲದ್ದಕ್ಕೂ ಒಂದು ಇತಿ ಮಿತಿ ಇದೆ. ಇಲ್ಲಿಯವರೆಗ ತಿದ್ದಿಕೊಳ್ಳುತ್ತಾರೆ ಅಂದುಕೊಂಡು ಸುಮ್ಮನಾಗಿದ್ವಿ. ಆದರೆ ಅದು ಆಗಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್