ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯ ಪ್ರತಿಫಲವೇ ಎನ್‌ಡಿಎ ಇಂದು ಭರ್ಜರಿ ಗೆಲುವು ಸಾಧಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು
ಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವು, ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತಕ್ಕಾಗಿ ಅವರ ಪರಿವರ್ತನಾಪ್ರೇರಿತ ಕಾರ್ಯಸೂಚಿಯಲ್ಲಿ ಜನರು ಹೊಂದಿರುವ ನಿರಂತರ ನಂಬಿಕೆಯ ದೃಢೀಕೃತ ಫಲಿತಾಂಶವಾಗಿದೆ ಎನ್ನುವುದು ನನ್ನ ಖಚಿತ ಅಭಿಪ್ರಾಯವಾಗಿದೆ.
ಈ ನಿರ್ಣಾಯಕ ಜನಾದೇಶವು ಜನರ…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 4, 2026
ಈ ನಿರ್ಣಾಯಕ ಜನಾದೇಶವು ಜನರ ಆಕಾಂಕ್ಷೆಗಳು ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್‌ನ ಮಾರ್ಗದರ್ಶಿ ತತ್ವಗಳ ನಡುವಿನ ಆಳವಾದ ಹೊಂದಾಣಿಕೆಯನ್ನು ಎತ್ತಿ ತೋರಿಸುತ್ತದೆ. ಇದು ಎನ್‌ಡಿಎಯನ್ನು ವಿಶ್ವಾಸಾರ್ಹತೆ, ಕಾರ್ಯಕ್ಷಮತೆಯ ವೇದಿಕೆಯಾಗಿ ಬಲಪಡಿಸುತ್ತದೆ. ಈ ಮೂಲಕ ಯಂಗ್ ಇಂಡಿಯಾ, ಸಮಗ್ರತೆ ಮತ್ತು ನಾಗರಿಕರೊಂದಿಗೆ ನಿಜವಾದ ಸಂಪರ್ಕವನ್ನು ಗೌರವಿಸುತ್ತದೆ ಎಂಬುದನ್ನು ತಿಳಿಸಿದೆ ಎಂದು ಹೇಳಿದ್ದಾರೆ.
The NDA’s emphatic victory today stands as a resounding affirmation of the people’s enduring trust in the visionary leadership of Hon’ble Prime Minister Shri @narendramodi avaru and his transformative agenda for a Viksit Bharat.
This decisive mandate reflects a deep alignment…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 4, 2026
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯತಂತ್ರದ ನಾಯಕತ್ವ ಮತ್ತು ರಾಷ್ಟ್ರೀಯ ಏಕತೆಗೆ ಅಚಲ ಬದ್ಧತೆಯು ಈ ಫಲಿತಾಂಶವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶಾದ್ಯಂತ ಎನ್‌ಡಿಎಯ ವ್ಯಾಪ್ತಿ ಮತ್ತು ಸಾಂಸ್ಥಿಕ ಆಳವನ್ನು ಮತ್ತಷ್ಟು ಬಲಪಡಿಸುತ್ತದೆ. ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಸಂಘಟನೆಗೆ ಶಕ್ತಿ ತುಂಬುವಲ್ಲಿ ಮತ್ತು ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಮಾಡಿದ ಪ್ರಯತ್ನಗಳು ಈ ಮಹತ್ವದ ಜನಾದೇಶಕ್ಕೆ ಕಾರಣವಾಗಿವೆ ಎಂದಿದ್ದಾರೆ.
ಪ್ರಧಾನಿ ನರೇದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಎಲ್ಲಾ ಎನ್‌ಡಿಎ ವಿಜೇತರು, ಸಮರ್ಪಿತ ಕಾರ್ಯಕರ್ತರು ಮತ್ತು ಈ ಐತಿಹಾಸಿಕ ಜನಾದೇಶಕ್ಕಾಗಿ ಜನತೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates












