– ನಿಮ್ಮ ಮೇಲಿನ ನಿರೀಕ್ಷೆ ಹುಸಿಯಾಗಿದೆ ಎಂದ ಮಾಗಡಿ ಶಾಸಕ
ರಾಮನಗರ: ಕುಮಾರಸ್ವಾಮಿ (HD Kumaraswamy) ಕೇಂದ್ರ ಮಂತ್ರಿ ಆದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿವೆ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ (HC Balakrishna) ಹೇಳಿದ್ದಾರೆ.
Advertisement
ಕೃಷಿಗೆ ಗ್ಯಾರಂಟಿ ಹಣ ಕೊಟ್ಟರೆ ರಾಜ್ಯ ಹೆಚ್ಚು ಅಭಿವೃದ್ಧಿ ಆಗುತ್ತೆ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಕೃಷಿಗೆ ಅನುದಾನ ನೀಡಲಿ. ಅವರೇ ಅದರ ಕ್ರೆಡಿಟ್ ಕೂಡಾ ತೆಗೆದುಕೊಳ್ಳಲಿ. ಕೃಷಿಗೆ ವಿಶೇಷ ಅನುದಾನ ತರುವಂತೆ ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿ, ಸ್ನೇಹಿತನನ್ನು ಕಡಿದು ಹಾಕಿದ ಪತಿ
Advertisement
Advertisement
ಮಂಡ್ಯ ಭಾಗದಲ್ಲಿ ರಸ್ತೆ ಮಾಡಿಸುತ್ತಿದ್ದಾರೆ ಅಷ್ಟೇ ಬಿಟ್ಟರೆ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಮೇಕೆದಾಟು ಯೋಜನೆ, ರೈತರಿಗೆ ವಿಶೇಷ ಅನುದಾನ, ನೀರಾವರಿ ಯೋಜನೆಯನ್ನ ಮಾಡಿಲ್ಲ. ಮೀಸಲಿಟ್ಟ ಭದ್ರಾ ಮೇಲ್ದಂಡೆ ಯೋಜನೆಯ 5,000 ಕೋಟಿ ಅನುದಾನ ಬಿಡುಗಡೆ ಮಾಡಿಸಿಲ್ಲ. ಕುಮಾರಸ್ವಾಮಿ ಎಲ್ಲರ ರೀತಿ ಮಂತ್ರಿಯಾಗಬಾರದು. ವಿಭಿನ್ನ ಕಾರ್ಯ ಚಟುವಟಿಕೆಗಳನ್ನ ತೋರಿಸಿ ರಾಜ್ಯಕ್ಕೆ ಅನುಕೂಲ ಮಾಡಬೇಕು ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ನಾವು ಫಿಲ್ಟರ್ ಮಾಡ್ತಿಲ್ಲ, ಎಲ್ಲರಿಗೂ ಹಣ ಸಿಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್
Advertisement