ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) 2 ಬಾರಿ ಸಿಎಂ ಆಗಿಯೇ ಪಕ್ಷವನ್ನು ಉಳಿಸಿಕೊಳ್ಳಲು ಆಗಿಲ್ಲ. ಈಗ ಮೈತ್ರಿ ಅಂತ ಮಾತಾಡಿ ಪಕ್ಷ ಉಳಿಸಿಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ಲೇವಡಿ ಮಾಡಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅರನ್ನು ನಮ್ಮ ಬ್ರದರ್ ಅಂತ ಲೇವಡಿ ಮಾಡಿದ್ರು. ಮೈತ್ರಿ ಬಗ್ಗೆ ಸ್ವಲ್ಪ ದಿನ ಕಾದು ನೋಡಿ ಏನಾಗಲಿದೆ ಅಂತ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಕಡೆ ಅಸಮಾಧಾನ ಸ್ಫೋಟ ಆಗಿದೆ. ಎರಡೂ ಕಡೆ ಶಾಸಕರು ದೋಸ್ತಿಗೆ ರಾಗ ತೆಗೆದಿದ್ದಾರೆ. ಇನ್ನೂ ಕೆಲ ಕಾಲ ನೋಡೋಣ ಎಂದು ಕುಟುಕಿದರು.
Advertisement
Advertisement
ಮೈತ್ರಿ ಬಗ್ಗೆ ಬಹಳ ಸ್ಪೀಡ್ ಆಗಿರೋದು ನಮ್ಮ ಬ್ರದರ್ ಮಾತ್ರ. 2 ಬಾರಿ ಸಿಎಂ ಮಾಡಿದಾಗಲೇ ಪಕ್ಷದ ಅಸ್ಥಿತ್ವ ಉಳಿಸಿಕೊಳ್ಳಲು ಆಗಲಿಲ್ಲ. ಈಗ ಪಕ್ಷ ಉಳಿಸಿಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ ಅಂತ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್
Advertisement
Advertisement
ಕುಮಾರಸ್ವಾಮಿ ಬ್ರದರ್ ಮತ್ತು ಬೊಮ್ಮಾಯಿ ಇಬ್ಬರೇ ಮೈತ್ರಿಯಾಗಲಿ ಅಂತ ಮಾತಾಡ್ತಿರೋದು. ಯಡಿಯೂರಪ್ಪ ಮಾತ್ರ ನೋಡೋಣ ಏನಾಗಲಿದೆ ಅಂತಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ ಎಂದರು. ಇನ್ನು ಮಾಜಿ ಸಚಿವ ಯೋಗೇಶ್ವರ್ ಕೂಡ ಮೈತ್ರಿಯಾಗಲಿ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್‌ಗೂ ಈಗ ಮೈತ್ರಿ ಅನಿವಾರ್ಯ ಇದೆ. ಅವರು ನನ್ನ ಸ್ನೇಹಿತರು. ಅವರಿಗೆ ಒಳ್ಳೆಯದಾಗಲಿ ಎಂದರು. ಇದನ್ನೂ ಓದಿ: ಹಿಂದೂಪರ ಕಾರ್ಯಕರ್ತರ ವಿರುದ್ಧ ಕೇಸ್ ಎಂಬ ಆರೋಪಕ್ಕೂ, ಚೈತ್ರಾ ಪ್ರಕರಣಕ್ಕೂ ಸಂಬಂಧ ಇಲ್ಲ: ಜಿ.ಪರಮೇಶ್ವರ್
Web Stories