– ದೆಹಲಿಗೆ ಹೊರಟ ಕುಮಾರಸ್ವಾಮಿ
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮೊದಲ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೇ ಮಾತಾಡ್ತೇನೆ ಎಂದು ಬೇಸರದಿಂದಲೇ ಹೊರಟರು. ಇದನ್ನೂ ಓದಿ: ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ – ಪರಮೇಶ್ವರ್
ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಳಿಕ ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದ ಹೆಚ್‌ಡಿಕೆ, ಜೆ.ಪಿ ನಗರದ ನಿವಾಸದಲ್ಲಿಯೇ ಇದ್ದರು, ಪುತ್ರ ನಿಖಿಲ್ ಸಹ ಜೊತೆಗಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶ | ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ
ಇಂದು ದೆಹಲಿಗೆ ಹೆಚ್‌ಡಿಕೆ:
ನವೆಂಬರ್ 25ರಂದು (ನಾಳೆ) ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆ ಸಚಿವ ಕುಮಾರಸ್ವಾಮಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 12.30ರ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಖಾತೆ ತೆರೆಯದ ʻಜನ್ ಸೂರಜ್ʼ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ಮುಖಭಂಗ
ಚನ್ನಪಟ್ಟಣ ಫಲಿತಾಂಶ – ಯಾರಿಗೆ ಎಷ್ಟು ಮತ?
* ಯೋಗೇಶ್ವರ್ – ಕಾಂಗ್ರೆಸ್ – ಗೆಲುವು – 1,12,642 ಮತ
* ನಿಖಿಲ್ – ಎನ್‌ಡಿಎ – ಸೋಲು – 87,229 ಮತ
* ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ