– ʻನಿಮ್ಮ ಕಷ್ಟಗಳಿಗೆ ಸ್ಪಂದಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆʼ
ಮಂಡ್ಯ: ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ (Mysugar School) ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.
ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ. ಮಂಡ್ಯ ನಗರದ ಐತಿಹಾಸಿಕ ಮೈಷುಗರ್ ಶಾಲೆಯ ಶಿಕ್ಷಕರು ಹಲವಾರು ತಿಂಗಳಿನಿಂದ ವೇತನವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದರು. ಬಾಕಿ ವೇತನಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದೆ. ಅದರಂತೆಯೇ ಸಂಸದನಾಗಿ ನನಗೆ ಸಿಗುವ ವೇತನವನ್ನೇ ಶಿಕ್ಷಕರಿಗೆ ವೇತನಕ್ಕಾಗಿ ನೀಡಿದ್ದೇನೆ. ₹19,94,200 ಮೊತ್ತದ ಚೆಕ್ ಅನ್ನು… pic.twitter.com/sKrGX4daG0
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 6, 2025
ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನೀವು ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ಯಾರಂಟಿಗೆ ಕೋಟಿಗಟ್ಟಲೇ ಖರ್ಚು ಮಾಡ್ತಿರೋದು ಸಮಾನತೆ ತರಲು: ಸಿದ್ದರಾಮಯ್ಯ

ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಆದಿಚುಂಚನಗಿರಿ ಶ್ರೀಗಳೊಂದಿಗೂ ಈ ಬಗ್ಗೆ ಮಾತಾಡಿದ್ದೇನೆ. ಒಂದೇ ರಾತ್ರಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ನಾನು ಹೇಳಲ್ಲ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿ ಮಾಡೋಣ. ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಕೇಳುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂ.1 ಶಾಲೆ ಆಗಿರಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ; ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ
ಶಿಕ್ಷಕರ ಕಷ್ಟ ತಿಳಿದು ನಾನು ಬಹಳ ನೊಂದಿದ್ದೆ. 15 ತಿಂಗಳಿಂದ ಸಂಬಳ ಇಲ್ಲದೇ ಕೆಲಸ ಮಾಡುವುದು ಎಂದರೆ ಸುಲಭವಲ್ಲ. ಆ ಸಂಕಷ್ಟದ ಕಾಲದಲ್ಲಿಯೂ ಅವರು ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಹೇಳುತ್ತೇನೆ. ಶಾಲೆ ಅಭಿವೃದ್ಧಿ ಎಲ್ಲರ ಕರ್ತವ್ಯ. ನನ್ನ ಕೈಲಾದದ್ದನ್ನು ನಾನು ಮಾಡುತ್ತೇನೆ. ಮಕ್ಕಳ ಅನುಕೂಲಕ್ಕೆ ಎರಡು ಶಾಲಾ ಬಸ್ ಬೇಕು ಎಂದು ಮನವಿ ಮಾಡಿದ್ದಾರೆ. ಮೈಶುಗರ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುವರೆಗೆ ಉಚಿತ ಶಿಕ್ಷಣ ನೀಡಲು ಹೇಳಿದ್ದೇನೆ. ಈ ಬಗ್ಗೆ ಚುಂಚನಗಿರಿ ಶ್ರೀಗಳ ಬಳಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸತ್ ಕಲಾಪ ಮುಗಿದ ಬಳಿಕ ಶ್ರೀಗಳ ಮಾರ್ಗದರ್ಶನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ನಾಯಕರಿಗೂ ಈ ಬಗ್ಗೆ ಹೇಳುತ್ತೇನೆ. ಶಾಲೆ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೆಚ್‌ಡಿಕೆ ಪ್ರತಿಪಾದಿಸಿದರು. ಇದನ್ನೂ ಓದಿ: ಕೇವಲ 100 ರೂ.ಗೆ ಹಾಟ್‌ಸ್ಟಾರ್, ಡೇಟಾ ಸೇರಿ ಜಿಯೋ ಸಕತ್ ಬಂಪರ್ ಆಫರ್

