Connect with us

Bengaluru City

ನನಗೆ ಕುಣಿಯಲು ಬರುತ್ತೆ- ಸಿದ್ದರಾಮಯ್ಯ ಹೇಳಿಕೆಗೆ ಎಚ್‍ಡಿಕೆ ತಿರುಗೇಟು

Published

on

– 14 ತಿಂಗ್ಳ ಅವಧಿಯಲ್ಲಿ ಚಿತ್ರಹಿಂಸೆ ನಡ್ವೆಯೂ ಹಲವು ಕೊಡುಗೆ

ಬೆಂಗಳೂರು: ಮೈತ್ರಿ ಸರ್ಕಾರದ 14 ತಿಂಗಳ ಅವಧಿಯಲ್ಲಿ ಹಲವು ಚಿತ್ರಹಿಂಸೆಗಳ ನಡುವೆಯೂ ರಾಜ್ಯದ ರೈತರ ಸಾಲಮನ್ನಾ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.

 

ಕುಣಿಲಾಗದವರು ನೆಲ ಡೊಂಕು ಅಂತ ಹೇಳ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಎಚ್‍ಡಿಕೆ, 14 ತಿಂಗಳ ಮೈತ್ರಿ ಸರ್ಕಾರದಲ್ಲಿ ಹಲವು ಚಿತ್ರಹಿಂಸೆಗಳ ನಡುವೆಯೂ ರಾಜ್ಯದ ಜನರಿಗೆ ಹಲವು ಕೊಡುಗೆಗಳನ್ನು ನೀಡಿದ್ದೇನೆ. ರಾಜ್ಯ ರೈತರ ಸಾಲಮನ್ನಾದಂತಹ ದಾಖಲೆಯ ಯೋಜನೆಯನ್ನು ಜಾರಿ ಮಾಡಿದ್ದೇನೆ. ಈಗ ಪ್ರಧಾನಿ ಮೋದಿ ಅವರು ಹೇಳುತ್ತೀರುವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಹಿನ್ನೆಲೆಯ ದೂರ ದೃಷ್ಟಿಯೊಂದಿಗೆ 9 ಕೈಗಾರಿಕಾ ಕ್ಲಸ್ಟರ್ ಪ್ರಾರಂಭ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಆದ್ದರಿಂದ ನನಗೆ ಕುಣಿಯಲು ಬರುತ್ತೆ. ಇವರಿಂದ ಅದನ್ನು ನಾನು ಹೇಳಿಸಿಕೊಳ್ಳ ಬೇಕಿಲ್ಲ. ಜನರೇ ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದರು.

ಕುಮಾರಸ್ವಾಮಿಗೆ ಡಿಕೆಶಿ ಮಿತ್ರ ದ್ರೋಹ ಮಾಡಿದ್ದಾರೆಂಬ ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಎಚ್‍ಡಿಕೆ, ಈಗ ಒಂದೊಂದೇ ಸತ್ಯ ಹೊರಗೆ ಬರುತ್ತಿದೆ. ಮೈತ್ರಿ ಸರ್ಕಾರ ಅಸ್ಥಿರ ಗೊಳಿಸುವ ಸಂದರ್ಭದಲ್ಲಿ ನಡೆದ ವಾಸ್ತವ ಸ್ಥಿತಿಗಳನ್ನು ಬಿಜೆಪಿ ನಾಯಕರೇ ಈಗ ಜನರಿಗೆ ತಿಳಿಸುತ್ತಿದ್ದಾರೆ. ಈಗ ಕೆಲವು ನಾಟಕಗಳ ಮೂಲಕ ಜನರಿಂದ ನನ್ನನ್ನು ದೂರ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಆದರೆ ಈಗ ಅಂತಹ ನಾಯಕರ ನಡವಳಿಕೆ ಏನೆಂದು ಜನರಿಗೆ ಗೊತ್ತಾಗುತ್ತಿದೆ. ಈಗಲಾದ್ರು ಜನರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿದ ಎಚ್‍ಡಿಕೆ, ಯತ್ನಾಳ್ ಹೇಳಿಕೆಗೂ ನನಗೂ ಸಂಬಂಧವಿಲ್ಲ. ಇದು ಅವರ ಪಕ್ಷದ ಆಂತರಿಕ ಸಮಸ್ಯೆಗಳು. ಅದನ್ನು ಅವರೇ ಸರಿಪಡಿಸಿಕೊಳ್ಳಬೇಕು ಎಂದರು.

ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರದ ಉಪ ಚುನಾವಣೆಯಗಳನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಎರಡು ಕ್ಷೇತ್ರಗಳಲ್ಲೂ ರಾಷ್ಟ್ರೀಯ ಅಧ್ಯಕ್ಷ ನೇತೃತ್ವದಲ್ಲಿ ಹೋರಾಟ ಮಾಡುತ್ತೇವೆ. ನಾಳೆಯಿಂದ ಮೂರು ದಿನಗಳ ಕಾಲ ಪ್ರಚಾರ ಮಾಡುತ್ತೇವೆ. ಶಿರಾದಲ್ಲೇ ಉಳಿದು ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳುತ್ತೇನೆ ಎಂದರು.

Click to comment

Leave a Reply

Your email address will not be published. Required fields are marked *

www.publictv.in