ಮಂಡ್ಯ: ಮದ್ಯ ಮಾರಾಟದಲ್ಲಿ ಬೆಲೆ ಏರಿಕೆ ಆಯ್ತು, ಸ್ಟಾಂಪ್ ಡ್ಯೂಟಿಯಲ್ಲಿ ಹೆಚ್ಚಳ ಮಾಡಿ ಆಯ್ತು, 5 ಗ್ಯಾರಂಟಿಗಾಗಿ ಹೆಚ್ಚಳ ಮಾಡಿದ್ದಾರೆ. ಈಗ ಬಡವರ ಜೇಬಿಗೆ ಕೈ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Advertisement
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಮದ್ಯ ಮಾರಾಟದಲ್ಲಿ ಬೆಲೆ ಏರಿಕೆ ಮಾಡಿ ಆಯ್ತು, ಸ್ಟಾಂಪ್ ಡ್ಯೂಟಿಯಲ್ಲಿ ಹೆಚ್ಚಾಳ ಮಾಡಿ ಆಯ್ತು, 5 ಗ್ಯಾರಂಟಿಗಾಗಿ ಹೆಚ್ಚಳ ಮಾಡಿದ್ದಾರೆ. ಈಗ ಬಡವರ ಜೇಬಿಗೆ ಕೈ ಹಾಕುತ್ತಿದ್ದಾರೆ. ಇದು ಜನ ಸಾಮಾನ್ಯರ ವಿರೋಧಿ ಸರ್ಕಾರ. ಟ್ರಾನ್ಸ್ ಪೋರ್ಟ್ ಮೇಲೆ ಒಡೆತ ಬೀಳುತ್ತೆ. ರೈತರಿಗೆ ತೊಂದರೆ ಆಗುತ್ತೆ. ಬಡವರ ಕಿಸೆಗೆ ಕೈ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಈ ಹಿಂದೆ ಕೇಂದ್ರದ ಬಗ್ಗೆ ಮಾತನಾಡಿದ್ದರು. ಈಗ ಜನರ ತೆರಿಗೆ ಹಣವನ್ನ ದುರ್ಬಳಕೆ ಮಾಡುವುದನ್ನ ತಡೆಗಟ್ಟದೇ ಈ ಸರ್ಕಾರ ಕುಳಿತಿದೆ. ರಾಜ್ಯದ ಜನತೆ ದುಡ್ಡು, ಯಾವ ಯಾವ ಇಲಾಖೆಯಲ್ಲಿ ಎಷ್ಟು ದೋಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ? ಇನ್ನು 15 ದಿನ ಆದ್ಮೇಲೆ ಏನೇನಾಗುತ್ತೋ? ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್
Advertisement
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ.
ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ (4.1% ರಷ್ಟು ಏರಿಕೆ). ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ