ಬೆಂಗಳೂರು: ಕೋಲಾರದ ಶಾಸಕ ಕೊತ್ತೂರು ಮಂಜುನಾಥ್(Kothur Manjunath) ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(H D Kumaraswamy) ಕಿಡಿಕಾರಿದ್ದಾರೆ.
ಪಹಲ್ಗಾಮ್’ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ @INCIndia ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ @narendramodi ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು.
ಕಾಂಗ್ರೆಸ್, ಭಾರತದ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2025
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪಹಲ್ಗಾಮ್‌ನಲ್ಲಿ(Pahalgam) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು, ಪ್ರಧಾನಿ ಶ್ರೀ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಎ ತಂಡ ಪ್ರಕಟ
ಕಾಂಗ್ರೆಸ್(Congress), ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್‌ಎ ಭಾರತದ್ದೋ ಅಥವಾ ಪಾಕಿಸ್ತಾನದ್ದೋ ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು. ಇದನ್ನೂ ಓದಿ: ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ ಮನಸ್ಥಿತಿಯಲ್ಲೇ ಇದೆ. ಅಸ್ತಿತ್ವ ಮಾತ್ರ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿದೆ. ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ ಆಕ್ರೋಶ ಹೊರಹಾಕಿದ್ದಾರೆ.
ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ ಆಪರೇಷನ್ ಸಿಂಧೂರ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ ಸ್ವರೂಪವನ್ನು ಖುದ್ದು ನೋಡಬೇಕೇ ಮಂಜುನಾಥ್? ಹಾಗಿದ್ದರೆ ಬನ್ನಿ, ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ
ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿಗೇಡಿ ಕಾಂಗ್ರೆಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ ಡಿಎನ್‌ಎ ಉಳ್ಳ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರಪ್ರೇಮವಿರಲು ಸಾಧ್ಯವೇ? ಆಪರೇಷನ್ ಸಿಂಧೂರದ(Operation Sindoor) ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ. ಇದನ್ನೂ ಓದಿ: Boycott Turkey| ಕೇಂದ್ರದ ವಿರುದ್ಧ ಕೋರ್ಟ್ ಮೊರೆ ಹೋದ ಸೆಲಿಬಿ
ಹಾಗೆಯೇ, ಪ್ರಧಾನಿ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಅಚಲತೆಯನ್ನು ನೋಡಿದೆ ಹಾಗೂ ಕೊಂಡಾಡಿದೆ. ಇದು ರಾಷ್ಟ್ರ ದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸ. ಇದನ್ನೂ ಓದಿ: ಬಿಎಸ್‌ಎಫ್ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್ ನೀಡಿದ್ದ ಪಾಕ್
ರಾಷ್ಟ್ರ ನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ರಹಸ್ಯವಾಗಿ ಏನೆಲ್ಲಾ ಮಾಡುತ್ತಿದೆ? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಎಕ್ಸ್ ಮೂಲಕ ಕಿಡಿಕಾರಿದ್ದಾರೆ.