Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳ ಅನುಷ್ಠಾನದ ಚರ್ಚೆಗೆ ರೆಡಿ – ಸಿಎಂಗೆ ಹೆಚ್‍ಡಿಕೆ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿಗಳ ಅನುಷ್ಠಾನದ ಚರ್ಚೆಗೆ ರೆಡಿ – ಸಿಎಂಗೆ ಹೆಚ್‍ಡಿಕೆ ಸವಾಲ್

Bengaluru City

ಗ್ಯಾರಂಟಿಗಳ ಅನುಷ್ಠಾನದ ಚರ್ಚೆಗೆ ರೆಡಿ – ಸಿಎಂಗೆ ಹೆಚ್‍ಡಿಕೆ ಸವಾಲ್

Public TV
Last updated: November 14, 2023 11:26 am
Public TV
Share
4 Min Read
HD Kumaraswamy 6
SHARE

ಬೆಂಗಳೂರು: ಗ್ಯಾರಂಟಿ ಯೋಜನೆಯಿಂದ ಕುಮಾರಸ್ವಾಮಿ ಅವರಿಗೆ ಹೊಟ್ಟೆ ಉರಿ ಎಂದಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಹೆಚ್‍ಡಿಕೆ (HD Kumaraswamy) ಬಹಿರಂಗ ಚರ್ಚೆಯ ಸವಾಲ್ ಹಾಕಿದ್ದಾರೆ. ನಾನು ಎಲ್ಲಿಗೆ ಬರಲಿ ಎಂದು ಸವಾಲ್ ಹಾಕಿದ್ದು, ಸರಣಿ ಟ್ವೀಟ್ ಮೂಲಕ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರೇ ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಗುಂಡಿನ ಚಕಮಕಿ – ಕೊಡಗಿನಲ್ಲಿ ಹೈ ಅಲರ್ಟ್

ಸನ್ಮಾನ್ಯ @siddaramaiah ನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ?
ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 14, 2023

5 ಗ್ಯಾರಂಟಿ ಕೊಟ್ಟಿದ್ದೀರಿ ಸರಿ, ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ? ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ ಸಮಾಜವಾದಿ ಆತ್ಮಸಾಕ್ಷಿ ಹೀಗೆಂದು ಹೇಳುತ್ತಿದೆಯೇ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು ಎಂದು ಕುಟುಕಿದ್ದಾರೆ.

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಹಾಗಾದರೆ ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮ ಗೋಷ್ಠಿ ಮಹಾಪಾಪವೇ? ನಿಮ್ಮ ಸಿದ್ದಾಂತರಾಳ ಹೀಗೆಂದು ಅಪ್ಪಣೆ ಕೊಟ್ಟಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ನಾನು ಹಳ್ಳಿಗಳಿಗೆ ಹೋಗಿ ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಅದೇ ಸತ್ಯವನ್ನು ಹೇಳಿದ್ದೇನೆ. ಬನ್ನಿ ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ. ಐಶಾರಾಮಯ್ಯನವರೇ ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. ವೈಎಸ್‍ಟಿ ಟ್ಯಾಕ್ಸ್ ಹಾಗೂ ಎಸ್‍ಎಸ್‍ಟಿ ಟ್ಯಾಕ್ಸ್ ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ ರೈತರ ಬದುಕಿಗೆ ಗ್ಯಾರಂಟಿ ಕೊಡಿ ಎಂದು ಆಗ್ರಹಿಸಿದ್ದಾರೆ.

ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು. ಇದ್ದಿದ್ದನ್ನು ಇದ್ದಂತೆ ಹೇಳಿದರೆ, ಅದನ್ನೇ ವಾಗ್ದಾಳಿ ಎಂದು ಅನುಕಂಪ ಗಿಟ್ಟಿಸಿಕೊಳ್ಳುವ ನಿಮ್ಮ ಬಗ್ಗೆ ಸಹಾನೂಭೂತಿ ಇದೆ. ಶಾಂತಿ, ದ್ವೇಷಾಸೂಯೆ, ಹತಾಶೆ ಬಗ್ಗೆ ದಯವಿಟ್ಟು ಮಾತನಾಡಬೇಡಿ. ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಮಲ್ಲಿಕಾರ್ಜುನ ಖರ್ಗೆ ಅವರೇ ಹೆಚ್ಚು ತಿಳಿದಿದ್ದಾರೆ. ಇನ್ನು ಚುನಾವಣೆ ಸೋಲು ಎಂದಿದ್ದೀರಿ? ಇದು ನನಗೂ ಹೊಸದಲ್ಲ, ನಿಮಗೂ ಹೊಸದಲ್ಲ. ನಿಮ್ಮ ಹಳಹಳಿಕೆ ಅರ್ಥ ಮಾಡಿಕೊಳ್ಳಬಲ್ಲೆ. ವೈಫಲ್ಯಗಳನ್ನೇ ವಕ್ರೀಕರಿಸಿ ಅನುಕಂಪ ಗಿಟ್ಟಿಸುವ ಹಳೆಯ ಚಾಳಿ ಬಿಡಿ. ನನ್ನ ಹೆಸರು ಕೇಳಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಭಯ ಅನ್ನುತ್ತೀರಿ. ಪ್ರಧಾನಿ ಬಗ್ಗೆ ಮುಖ್ಯಮಂತ್ರಿ ಆಡುವ ಮಾತೇ ಇದು. ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ. ಸಾಲುಸಾಲು ಸಮ್ಮಾನ ಬೇಕು ಎಂದನಂತೆ ಒಬ್ಬ. ಹಾಗಿದೆ ನಿಮ್ಮ ಧಿಮಾಕು. ಧಮ್ಮು, ತಾಕತ್ತು, ಗೈರತ್ತಿನಿಂದ ಕೆಲಸ ಆಗಲ್ಲ ಮುಖ್ಯಮಂತ್ರಿಗಳೇ? ಐದು ವರ್ಷ ಸಿಎಂ ಆಗಿದ್ದ ನಿಮಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಾವೇರಿ ವಿಷಯದಲ್ಲಿಯೇ ನಿಮ್ಮ ದಮ್ಮು, ತಾಕತ್ತು ಮೂರಾಬಟ್ಟೆ ಆಗಿದೆ. ತಮಿಳುನಾಡಿಗೆ ಈಗಲೂ ನೀರು ಹರಿಯುತ್ತಿದೆ ಕಾಣುತ್ತಿಲ್ಲವೇ? ಮಹಾದೇವಪ್ಪ ನಿಂಗೂ ಕತ್ತಲು ಫ್ರೀ ನಂಗೂ ಕತ್ತಲು ಫ್ರೀ. ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ ಇದು ನಿಮ್ಮ ಗ್ಯಾರಂಟಿಗಳ ಸ್ಥಿತಿ. ಸುಳ್ಳೇಕೆ ಹೇಳುತ್ತೀರಿ? ಆ ಪದವಿಗಾದರೂ ಗೌರವ ಬೇಡವೇ? ಸೀಟಿನಲ್ಲಿ ಕೂತು ಸುಳ್ಳು ಹೇಳಬೇಡಿ. ಉಚಿತ, ಖಚಿತ ಎಂದವರು ನೀವು. ಇವು ಅಗ್ಗದ ಯೋಜನೆಗಳು ಎಂದು ನಾನು ಹೇಳಿದ್ದೂ ಹೌದು. ನಾನೇ ಏಕೆ ನಿಮ್ಮ ಸಂಪುಟದ ಹಾಲಿ ಕ್ಯಾಬಿನೇಟ್ ಮಂತ್ರಿಯೊಬ್ಬರೇ ಎಲೆಕ್ಷನ್ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್ ಗಿಮಿಕ್ ಟ್ರಿಕ್ಸ್ ಮಾಡಲೇಬೇಕು ಎಂದು ಹೇಳಿರಲಿಲ್ಲವೇ? ವೈರಲ್ ಆಗಿದ್ದ ಆ ವಿಡಿಯೋ ನಿಮ್ಮ ಮೊಬೈಲಿಗೂ ಬಂದಿರಬೇಕಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ.

ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ,ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಸೋಲು,ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ, ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ ಎಂದು ನೋಡೋಣ. ಸಾಲದ ಶೂಲ, ಆರ್ಥಿಕ ದಿವಾಳಿತನ, ಆರ್ಥಿಕ ಅಸ್ಥಿರತೆ-ಅದಕ್ಷತೆ, ಪರಾಧೀನ ಬದುಕು, ಕಮೀಷನ್ ಕಾಂಡ ಇವು ಕಾಂಗ್ರೆಸ್ (Congress) ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು. ಇನ್ನು ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ ಎಂದು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: KEA ಪರೀಕ್ಷೆ – ಮಂಗಳಸೂತ್ರ, ಕಾಲುಂಗರಕ್ಕೆ ಮಾತ್ರ ವಿನಾಯಿತಿ : ಟಫ್‌ ರೂಲ್ಸ್‌ ಏನು?

TAGGED:congresshd kumaraswamypoliticssiddaramaiahಕಾಂಗ್ರೆಸ್ಕಾಂಗ್ರೆಸ್‌ ಗ್ಯಾರಂಟಿರಾಜಕೀಯಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
2 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
2 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
3 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
3 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
4 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?