Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ ಕಿಡಿ

Bengaluru City

ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ ಕಿಡಿ

Public TV
Last updated: March 12, 2023 3:31 pm
Public TV
Share
7 Min Read
HDK 2 1
SHARE

ಬೆಂಗಳೂರು: ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ (Mysuru Bengaluru Expressway) ಯಾರಿಗೆ ಉಪಯೋಗ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದರು.

ಭಾನುವಾರ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಮಂಡ್ಯದಲ್ಲಿ (Mandya) ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ ವಾಗ್ದಾಳಿ ನಡೆಸಿದರು.

ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ.1/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಟ್ವೀಟ್‍ನಲ್ಲಿ ಏನಿದೆ?: ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ (Ramanagara), ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ.

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.2/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.

ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ; ಕೆಳಗಿನ ಅಂಶಗಳನ್ನು ಗಮನಿಸೋಣ. 3/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ ಕೆಳಗಿನ ಅಂಶಗಳನ್ನು ಗಮನಿಸೋಣ.

1. ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ. 4/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆಯ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ.

2. ಮಧ್ಯಮ,ಸಣ್ಣಗಾತ್ರದ ಹೊಟೇಲು, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ.6000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ‌ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ.5/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಮಧ್ಯಮ, ಸಣ್ಣ ಗಾತ್ರದ ಹೊಟೆಲ್, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2,600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ. 6,000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ.

ಮಂಡ್ಯ, ರಾಮನಗರ ಜಿಲ್ಲೆಗಳ ಜನರ ಜೀವನಾಡಿಯೇ ಆಗಿದ್ದ ಹಳೆಯ ಹೆದ್ದಾರಿ ಲಕ್ಷಾಂತರ ಜನರ ಜೀವನಕ್ಕೆ ದಾರಿ ಆಗಿತ್ತು. ಹೊಸ ಹೆದ್ದಾರಿ ಕೆಲವರಿಗೆ ಹಣದ ದಾರಿಯಷ್ಟೆ. ಜನರ ಜೀವನೋಪಾಯದ ಸರಪಳಿಯನ್ನು ಎಕ್ಸ್‌ಪ್ರೆಸ್ ಹೆದ್ದಾರಿ ಬಲಿ ತೆಗೆದುಕೊಂಡಿದೆ. ಅವರ ವೈಯಕ್ತಿಕ ಬದುಕಿಗೆ, ಆರ್ಥಿಕ ಶಕ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದು ಸತ್ಯ.

3. ಮಂಡ್ಯ, ರಾಮನಗರ ಜಿಲ್ಲೆಗಳ ಜನರ ಜೀವನಾಡಿಯೇ ಆಗಿದ್ದ ಹಳೆಯ ಹೆದ್ದಾರಿ ಲಕ್ಷಾಂತರ ಜನರ ಜೀವನಕ್ಕೆ ದಾರಿ ಆಗಿತ್ತು. ಹೊಸ ಹೆದ್ದಾರಿ ಕೆಲವರಿಗೆ ಹಣದ ದಾರಿಯಷ್ಟೆ. ಜನರ ಜೀವನೋಪಾಯದ ಸರಪಳಿಯನ್ನು ಎಕ್ಸ್ ಪ್ರೆಸ್ ಹೆದ್ದಾರಿ ಬಲಿ ತೆಗೆದುಕೊಂಡಿದೆ. ಅವರ ವೈಯಕ್ತಿಕ ಬದುಕಿಗೆ, ಆರ್ಥಿಕ ಶಕ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದು ಸತ್ಯ.6/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಹಳೆಯ ಹೆದ್ದಾರಿ ಜೊತೆ ಹಾಸು ಹೊಕ್ಕಾಗಿದ್ದ ಜನರು, ಈಗ ತಮ್ಮ ಊರುಗಳಿಗೆ ತೆರಳಲು ಕನಿಷ್ಠ 10ರಿಂದ 25 ಕಿ.ಮೀ. ಸುತ್ತಿ ಬರಬೇಕಿದೆ. ಸ್ಥಳೀಯರಿಗೆ ಸುತ್ತುವ ಶಿಕ್ಷೆ ಯಾಕೆ? ಭೂಮಿ ಕಳೆದುಕೊಂಡ ಪುಣ್ಯಕ್ಕೆ ಅವರು ಬಳಸಿ ಬಳಿಸಿ ಬಸವಳಿದು ತಮ್ಮ ಹಳ್ಳಿಗಳಿಗೆ ಬರಬೇಕಾ? ಇದು ಯಾವ ಸೀಮೆಯ ನ್ಯಾಯ? ದಶಪಥ ಕಲ್ಪಿಸಿದ ದೌರ್ಭಾಗ್ಯ ಇದು.

ಬದುಕು ಕಸಿದುಕೊಂಡ ದಶಪಥ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಂಡ್ಯ ಸೇರಿ ಹೆದ್ದಾರಿ ಉದ್ದಕ್ಕೂ ಜನರ ಆಕ್ರೋಶ ಅಸ್ಫೋಟಗೊಂಡಿದೆ. ಕಪ್ಪುಪಟ್ಟಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಅದು ಬೇಡ ಎಂದು ವಿನಂತಿಸುತ್ತೇನೆ. ನ್ಯಾಯ ಕೇಳೋಣ, ಹಕ್ಕು ಪ್ರತಿಪಾದಿಸೋಣ. ಅವರಿಗೆ ಅಗೌರವ ತೋರಿಸುವುದು ಬೇಡ.

4. ಹಳೆಯ ಹೆದ್ದಾರಿ ಜತೆ ಹಾಸು ಹೊಕ್ಕಾಗಿದ್ದ ಜನರು, ಈಗ ತಮ್ಮ ಊರುಗಳಿಗೆ ತೆರಳಲು ಕನಿಷ್ಠ 10ರಿಂದ 25 ಕಿ.ಮೀ. ಸುತ್ತಿ ಬರಬೇಕಿದೆ. ಸ್ಥಳೀಯರಿಗೆ ಸುತ್ತುವ ಶಿಕ್ಷೆ ಯಾಕೆ? ಭೂಮಿ ಕಳೆದುಕೊಂಡ ಪುಣ್ಯಕ್ಕೆ ಅವರು ಬಳಸಿಬಳಿಸಿ ಬಸವಳಿದು ತಮ್ಮ ಹಳ್ಳಿಗಳಿಗೆ ಬರಬೇಕಾ? ಇದು ಯಾವ ಸೀಮೆಯ ನ್ಯಾಯ? ದಶಪಥ ಕಲ್ಪಿಸಿದ ದೌರ್ಭಾಗ್ಯ ಇದು.7/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಜನರಿಗೂ ಸಿಟ್ಟಿದೆ, ಅದು ಸಹಜ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನಿರಾಕರಿಸಿದ್ದು ಏಕೆ? ಇದು ಅವೈಜ್ಞಾನಿಕ ಮತ್ತು ಅಕ್ಷಮ್ಯ. ಷಟ್ಪಥದ (ಆರು ಪಥ) ಮುಖ್ಯ ಕಾರಿಡಾರಿನಲ್ಲಿ ಕೊನೆಯ ಪಕ್ಷ ಎರಡನ್ನಾದರೂ ದ್ವಿಚಕ್ರ ವಾಹನಗಳಿಗೆ ಮೀಸಲಿಡಬಾರದೇಕೆ? ಇದೇನು ಬಿಟ್ಟಿ ಉಪಕಾರವೇ? ಅಲ್ಲ, ಆ ಜನರ ಹಕ್ಕು.

30 ವರ್ಷ ಕಾಲ ಈ ಹೆದ್ದಾರಿಯಲ್ಲಿ ಸಂಚರಿಸುವ ಜನರು ಟೋಲ್ ಕಟ್ಟುತ್ತಾರೆ. ಸಂಗ್ರಹವಾಗುವ ಶುಲ್ಕದ ಮೂಲಕವೇ ರಸ್ತೆ ನಿರ್ಮಾಣದ ಖರ್ಚನ್ನು ಜನರೇ ಭರಿಸುತ್ತಾರೆ. ಗುತ್ತಿಗೆದಾರರ ಜೇಬಿಗೆ ಬಹುದೊಡ್ಡ ಗಂಟು ಸೇರಲಿದೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದಿಂದ ಈ ಯೋಜನೆಗೆ ಬಿಡಿಗಾಸು ಬಂದಿಲ್ಲ. ದಶಪಥದ ಒಳಲೆಕ್ಕಗಳ ಸತ್ಯ ಜನರಿಗೆ ಗೊತ್ತಾಗಬೇಕಿದೆ.

6. ಜನರಿಗೂ ಸಿಟ್ಟಿದೆ, ಅದು ಸಹಜ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನಿರಾಕರಿಸಿದ್ದು ಏಕೆ? ಇದು ಅವೈಜ್ಞಾನಿಕ ಮತ್ತು ಅಕ್ಷಮ್ಯ. ಷಟ್ಪಥದ (ಆರು ಪಥ) ಮುಖ್ಯ ಕಾರಿಡಾರಿನಲ್ಲಿ ಕೊನೆಯಪಕ್ಷ ಎರಡನ್ನಾದರೂ ದ್ವಿಚಕ್ರ ವಾಹನಗಳಿಗೆ ಮೀಸಲಿಡಬಾರದೇಕೆ? ಇದೇನು ಬಿಟ್ಟಿ ಉಪಕಾರವೇ? ಅಲ್ಲ, ಆ ಜನರ ಹಕ್ಕು. 9/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಕನ್ನಡಿಗರಿಗೆ ಕಣ್ಣಿಗೆ ಮಂಕುಬೂದಿ ಎರಚಿ, ಈ ಸತ್ಯವನ್ನು ಮರೆಮಾಚಿ, ತಾವೇ ಈ ರಸ್ತೆ ನಿರ್ಮಾಣಕ್ಕೆ ಕಾರಣ ಎಂದು ಬಿಜೆಪಿಗರು ರಣರಣ ಬೊಬ್ಬೆ ಹೊಡೆಯುತ್ತಿರುವುದು ದಶಪಥ ಹೆದ್ದಾರಿ ಹೆಸರಿನಲ್ಲಿ ಮಾಡುತ್ತಿರುವ ಮಹಾದ್ರೋಹವಾಗಿದೆ. ಈ ಎಕ್ಸ್‌ಪ್ರೆಸ್ ಹೆದ್ದಾರಿಯ ನಿಜವಾದ ಹಕ್ಕುದಾರರಾದ ರಾಮನಗರ, ಮಂಡ್ಯ ಜನರನ್ನು ಪರಾವಲಂಬಿಗಳನ್ನಾಗಿ ಮಾಡಿದ್ದಲ್ಲದೆ, ಭೂಮಿ ಕಳೆದುಕೊಂಡ ಬಡರೈತರು ಹೆದ್ದಾರಿ ಬದಿ ನಿಂತು ಭಿಕ್ಷೆ ಬೇಡುವಂಥ ದುಃಸ್ಥಿತಿಯನ್ನು ಕೇಂದ್ರ ಸರ್ಕಾರ ಸೃಷ್ಟಿಸಿದೆ.

8. ಕನ್ನಡಿಗರಿಗೆ ಕಣ್ಣಿಗೆ ಮಂಕುಬೂದಿ ಎರಚಿ, ಈ ಸತ್ಯವನ್ನು ‌ಮರೆಮಾಚಿ, ತಾವೇ ಈ ರಸ್ತೆ ನಿರ್ಮಾಣಕ್ಕೆ ಕಾರಣ ಎಂದು ಬಿಜೆಪಿಗರು ರಣರಣ ಬೊಬ್ಬೆ ಹೊಡೆಯುತ್ತಿರುವುದು ದಶಪಥ ಹೆದ್ದಾರಿ ಹೆಸರಿನಲ್ಲಿ ಮಾಡುತ್ತಿರುವ ಮಹಾದ್ರೋಹ.11/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ದಶಪಥ ಹೆದ್ದಾರಿ ಕಸಿದುಕೊಂಡ ಬದುಕಿಗೆ ಉತ್ತರದಾಯಿ ಯಾರು? ಅವರ ಜೀವನೋಪಾಯಕ್ಕೆ ಪರ್ಯಾಯ ದಾರಿ ಯಾವುದು? ಪ್ರಧಾನಮಂತ್ರಿಗಳು ಈ ಬಗ್ಗೆ ಜನರಿಗೆ ವಿಶ್ವಾಸ ತುಂಬಬೇಕು. ರೋಡ್ ಶೋ ಮಾಡುವುದಕ್ಕಿಂತ ತುರ್ತಾಗಿ ಮಾಡಬೇಕಿರುವುದು ಇದನ್ನು. ಅಬ್ಬರ, ಅರ್ಭಟದಲ್ಲಿ ಜನರ ಬದುಕು ಅವನತಿ ಆಗಬಾರದು ಎನ್ನುವುದು ನನ್ನ ಕಳಕಳಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ!
ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!!
ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ.
ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು.15/15

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 12, 2023

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ! ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!! ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ. ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

TAGGED:hd kumaraswamyjdsmandyaMysuru Bengaluru Expresswaynarendra modiಜೆಡಿಎಸ್ಬಿಜೆಪಿಬೆಂಗಳೂರು-ಮೈಸೂರು ದಶಪಥ ಹೆದ್ದಾರಿಮಂಡ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
23 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
33 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
57 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
1 hour ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?