ಬೆಂಗಳೂರು: ಫೋನ್ ಟ್ಯಾಪ್‌ನಂತಹ (Phone Tapping) ನೀಚ ಕೆಲಸ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರಿಗೆ ತಿರುಗೇಟು ನೀಡಿದ್ದಾರೆ.
ಸರ್ಕಾರ ನಮ್ಮ ಕುಟುಂಬವರ ಫೋನ್ ಟ್ಯಾಪ್ ಮಾಡ್ತಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜಕೀಯ ಜೀವನದಲ್ಲಿ ಯಾವತ್ತು ಫೋನ್ ಟ್ಯಾಪ್ ಮಾಡೋ ನೀಚ ಕೆಲಸ ಮಾಡಿಲ್ಲ.ಈಗಲೂ ಮಾಡಿಲ್ಲ, ಹಿಂದೆ ಸಿಎಂ ಆಗಿದ್ದಾಗಲೂ ಮಾಡಿಲ್ಲ.ಇಲ್ಲಿವರೆಗೂ ನಾನು ಅಂತಹ ಕೆಲಸ ಮಾಡಿಲ್ಲ ಮುಂದೆ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ
ಪ್ರಜ್ವಲ್ ರೇವಣ್ಣ ಪ್ರಕರಣವನ್ನು (Prajwal Revanna Case) ಬೇರೆ ಕಡೆ ಕಡೆ ತಿರುಗಿಸಲು ಹೀಗೆಲ್ಲ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.