ಬೆಂಗಳೂರು: ಸಚಿವರ ಖಾತೆ ಹಂಚಿಕೆ ಇನ್ನು ಮುಗಿಯದ ಕಗ್ಗಂಟಾಗಿದ್ದು, ಇಂದು ಸಚಿವರ ಪ್ರಮಾಣ ವಚನಕ್ಕೆ ಟೈಮ್ ಫಿಕ್ಸ್ ಆಗಲಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ. ಈ ವೇಳೆ ಸಚಿವರ ಪ್ರಮಾಣಕ್ಕೆ ಸಮಯ ಕೇಳಲಿದ್ದಾರೆ.
Advertisement
ರಾಜ್ಯಪಾಲರನ್ನು ಭೇಟಿ ಮಾಡಿದಾಗ ಸಚಿವರ ಪಟ್ಟಿ ರಾಜ್ಯಪಾಲರಿಗೆ ನೀಡುವ ಸಾಧ್ಯತೆ ಇದೆ. ಇನ್ನು ಭಾನುವಾರ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಇತರೆ ನಾಯಕರುಗಳು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!
Advertisement
ಮಾತುಕತೆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ವಿಧಾನಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿ ಮಾಡುವ ಸಾಧ್ಯತೆ ಇದೆ. ಬಹುತೇಕ ಭಾನುವಾರ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಜೆಡಿಎಸ್-ಕಾಂಗ್ರೆಸ್‍ಗೆ ಯಾವ್ಯಾವ ಖಾತೆ ಯಾರಿಗೆ?. ಯಾರು ಯಾರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಡಿಜಿಪಿ ನೀಲಮಣಿ ರಾಜು ಭೇಟಿ – ಖಡಕ್ ಸೂಚನೆ ಕೊಟ್ಟ ಎಚ್‍ಡಿಕೆ
Advertisement