ನವದೆಹಲಿ: ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಲವಾರು ಮನವಿಗಳನ್ನು ಸಲ್ಲಿಸಿ, ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು.
ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿಯವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಗಡ್ಕರಿಯೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜೊತೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು. ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವರು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ ಮಾಡುವುದು, ಅದರ ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್‌ಗಳು, ಪಾದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕುಮಾರಸ್ವಾಮಿ ಕೋರಿದರು. ಇದನ್ನೂ ಓದಿ: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿಗೆ ಕುಮಾರಸ್ವಾಮಿ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್
ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NK=H-150A) ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಸಚಿವರು ಗಡ್ಕರಿಯವರೊಂದಿಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಕುಂಭಮೇಳದ ಆಹ್ವಾನ
ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ; ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು; ,ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69, NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಯೋಜನೆಗಳ ಬಗ್ಗೆಯೂ ಹೆಚ್‌ಡಿಕೆ ಸಾರಿಗೆ ಸಚಿವರ ಗಮನ ಸೆಳೆದರು. ಇದನ್ನೂ ಓದಿ: ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್ ವಿಕ್ರಂ ಗೌಡ ಸಹೋದರಿ ಮನವಿ