ಬೆಂಗಳೂರು: ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನ ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನ ಭೇಟಿಯಾಗಿದ್ದಾರೆ. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
Advertisement
ಬೆಂಗಳೂರಿನಲ್ಲಿರುವ ಸುಮಲತಾರ (Sumalatha Ambareesh) ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು. ಬಳಿಕ ಸುಮಲತಾ ಅವರು ಹೆಚ್‌ಡಿಕೆ ಅವರನ್ನ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಗೆ ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ: ಡಾ.ಮಂಜುನಾಥ್
Advertisement
Advertisement
ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಸುಮಲತಾ ನಿರ್ಧಾರ ಪ್ರಕಟಕ್ಕೂ ಮುನ್ನವೇ ಆಪ್ತನಿಂದ ಶಾಕ್ – ಹೆಚ್‍ಡಿಕೆ ಪರ ಪ್ರಚಾರಕ್ಕಿಳಿದ ಸಚ್ಚಿದಾನಂದ
Advertisement
ಶನಿವಾರವಷ್ಟೇ ಸಂಸದೆ ಸುಮಲತಾ ಅಂಬರೀಷ್ ಬೆಂಗಳೂರಿನ ನಿವಾಸದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದ್ದರು. ಸಭೆಯಲ್ಲಿ ಬೆಂಬಲಿಗರು ಪಕ್ಷೇತರವಾಗಿ ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ ಸುಮಲತಾ ಅಂಬರೀಶ್ ನಾನು ನಿಮ್ಮ ಆಸೆಗೆ ವಿರುದ್ಧ ಹೋಗಲ್ಲ. ಯೋಚನೆ ಮಾಡಿ ಏ.3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ಹೇಳುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಸುಮಲತಾ ನಿವಾಸಕ್ಕೆ ತೆರಳಿ ತಮ್ಮ ಸ್ಪರ್ಧೆಗೆ ಬೆಂಬಲ ಕೋರಿದ್ದಾರೆ.