
ರಾಯಚೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ನೇತೃತ್ವದ ಜೆಡಿಎಸ್ ಪಂಚರತ್ನ ಯಾತ್ರೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲೂಕು ಮುದಗಲ್ ಪಟ್ಟಣದಿಂದ ಆರಂಭವಾಗಿದೆ. ಈ ವೇಳೆ ಅಲ್ಲಿನ ಕಾರ್ಯಕರ್ತರು ಡೊಳ್ಳಿನ ಹಾರ ಹಾಕಿ ಸನ್ಮಾನಿಸಿದರು.
ಹೆಚ್‌ಡಿಕೆಯನ್ನು ಅದ್ಧೂರಿಯಾಗಿ ಸ್ವಾಗತಿಸಿದ ನೂರಾರು ಕಾರ್ಯಕರ್ತರು ಮುದಗಲ್‌ನಲ್ಲಿ ಡೊಳ್ಳಿನ ಹಾರ ಹಾಕಿ ಸನ್ಮಾನಿಸಿದರು. 25ಕ್ಕೂ ಹೆಚ್ಚು ಡೊಳ್ಳುಗಳಿಂದ ತಯಾರಿಸಿದ ಬೃಹತ್ ಹಾರ ಹಾಕುವ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಮೇಲಿನ ಅಭಿಮಾನ ಮೆರೆದರು. ಇಂದಿನಿಂದ 5 ದಿನಗಳ ಕಾಲ ನಡೆಯುವ ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ (JDS) ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಸಂಕಷ್ಟದಲ್ಲಿ ತೊಗರಿ ಬೆಳೆಗಾರರು : ಇಂದು ಸಂಜೆ ಪರಿಹಾರ ಘೋಷಣೆ – ಬೊಮ್ಮಾಯಿ
ಮುದಗಲ್‌ನ ಪೊಲೀಸ್ ಠಾಣೆ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಹರಿಹಾಯ್ದರು. ಮುದಗಲ್‌ನಲ್ಲಿ ನಡೆದ ಸಮಾವೇಶದಲ್ಲಿ ಲಿಂಗಸುಗೂರು ನಿಯೋಜಿತ ಅಭ್ಯರ್ಥಿ ಸಿದ್ದು ಬಂಡಿ, ಶಂಸುಲ್ ಹಕ್ ಖಾನ್, ಶಾಸಕರಾದ ವೆಂಕಟರಾವ್ ನಾಡಗೌಡ, ಶರಣಗೌಡ ಕಂದಕೂರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಗುಜರಾತ್ ಮಾಡೆಲ್ ಜಾರಿ?
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k