ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ತಾತ್ಕಾಲಿಕ ಪರಿಹಾರ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು, ಪ್ರತಿಭಟನೆಗಳಿಗೆ ಮಣಿದು ಸರ್ಕಾರ ಹಣ ಬಿಡುಗಡೆ ಮಾಡಿದೆ ಎಂದು ಟೀಕೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‍ಡಿಕೆ, ಪ್ರತಿಘಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1,200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ತರನ್ನು ಮರೆತಿದದ್ದು, ದುರಂತ. ಈಗಲಾರದು ಎಚ್ಚೆತ್ತುಕೊಳ್ಳಲಿ ಎಂದು ಲೇವಡಿ ಮಾಡಿದ್ದಾರೆ.
Advertisement
ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 4, 2019
Advertisement
ಇತ್ತ ಕೇಂದ್ರ ಸರ್ಕಾರ ತಾತ್ಕಾಲಿಕ ಪರಿಹಾರವಾಗಿ ಎನ್‍ಡಿಆರ್ ಎಫ್‍ನಿಂದ ಹಣ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಸಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.
Advertisement
ಪ್ರವಾಹ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಸಚಿವರನ್ನು ರಾಜ್ಯ ನಾಯಕರು ನಿನ್ನೆಯಷ್ಟೇ ಭೇಟಿಯಾಗಿದ್ದರು. ಈ ನಡುವೆ ರಾಜ್ಯದಲ್ಲಿ ಸರ್ಕಾರ ವಿರುದ್ಧ ಜನರಿಂದ ಕೇಳಿ ಬರುತ್ತಿದ್ದ ಆಕ್ರೋಶದ ವಿರುದ್ಧ ವಿವರಿಸಿದ್ದರು. ಸದ್ಯ ರಾಜ್ಯ ಸರ್ಕಾರ ಮನವಿ ಮಾಡಿದ್ದ ಪರಿಹಾರಕ್ಕೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ 1200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
Advertisement
Central Government has released an amount of 1200 Crores for Karnataka in advance from the National Disaster Response Fund. Expressing gratitude for the support to @PMOIndia Sri @narendramodi ji & @HMOIndia Sri @AmitShah ji on behalf of the people of Karnataka.
— B.S.Yediyurappa (@BSYBJP) October 4, 2019