Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Districts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Public TV
Last updated: March 2, 2026 3:53 pm
Public TV
Share
2 Min Read
Siddaramaiah HD Kumaraswamy
SHARE

ಮಂಡ್ಯ: ಜಿಲ್ಲೆಯ ಮದ್ದೂರು (Maddur) ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರ ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ಜನಾಭಿಪ್ರಾಯ ಪರಿಗಣಿಸದೇ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನ ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ.

Siddaramaiah 5

ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ (Farmer Leader) ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರುವ ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳನ್ನು ಆಲಿಸಿದ್ದೇನೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸುನಂದಾ ಜಯರಾಮ್ ಅವರು ತಮಗೆ ನೀಡಿದ್ದ ಮನವಿ ಪತ್ರವನ್ನು ಲಗತ್ತಿಸಿದ್ದಾರೆ.

ಯಾವುದೇ ಕಾರಣಕ್ಕೂ ಮದ್ದೂರು ನಗರಸಭೆ ವ್ಯಾಪ್ತಿಗೆ ಈ ಗ್ರಾಮಗಳನ್ನು ಸೇರಿಸಬಾರದು. ಕೂಡಲೇ ಈ ಜನವಿರೋಧಿ ನಿರ್ಧಾರವನ್ನ ಹಿಂಪಡೆಯಬೇಕೆಂದು ಒಕ್ಕೂರಲ ಒತ್ತಾಯ ಮಾಡಿರುತ್ತಾರೆ. ಸ್ಥಳೀಯರ ಮನವಿಗೆ ಮನ್ನಣೆ ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ. ಅಲ್ಲದೆ, ಜನತೆಯ ನಿರ್ಧಾರಕ್ಕೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದು ಸರಿಯಲ್ಲ ಎಂದು ಸಚಿವರು ಮುಖ್ಯಮಂತ್ರಿಗಳನ್ನ ಒತ್ತಾಯಿಸಿದ್ದಾರೆ.

ಕೃಷಿ ಆಧರಿತ ಪ್ರದೇಶ:
ಈ ಭಾಗದ ಎಲ್ಲಾ ಗ್ರಾಮಗಳು ಕೃಷಿ ಆಧರಿತವಾಗಿದ್ದು, ಸುಮಾರು 2,000 ಎಕರೆಗೂ ಹೆಚ್ಚು ಭೂಮಿ ನೀರಾವರಿ ಪ್ರದೇಶವಾಗಿರುತ್ತದೆ ಎಂಬುದು ಗಮನಾರ್ಹ. ಭತ್ತ, ಕಬ್ಬು, ಹೂವು, ತರಕಾರಿ ಇನ್ನಿತರ ಬೆಳೆಗಳನ್ನು ಸಮೃದ್ಧವಾಗಿ ಬೆಳೆಯಲಾಗುತ್ತಿದೆ. ಹೈನುಗಾರಿಕೆ, ಪಶು ಸಾಕಾಣಿಕೆಯಲ್ಲಿ ರೈತಾಪಿ ಜನ ತೊಡಗಿಕೊಂಡಿದ್ದಾರೆ. ಜತೆಗೆ ಗೆಜ್ಜಲಗೆರೆ ಗ್ರಾಮದಲ್ಲಿಯೇ ಮಂಡ್ಯ ಜಿಲ್ಲೆಯ ಹಾಲು ಉತ್ಪಾದನಾ ಮಂಡಳಿ (ಮನ್ ಮುಲ್) ಕಾರ್ಯ ನಿರ್ವಹಿಸುತ್ತಿದೆ. ಸರಕಾರಿ ಆಸ್ಪತ್ರೆ, ವಿದ್ಯಾಸಂಸ್ಥೆಗಳು ಸೇರಿ ಅನೇಕ ಮೂಲಸೌಕರ್ಯ ಸೇವೆಗಳು ಜನರಿಗೆ ಲಭ್ಯವಿವೆ ಎಂಬ ಅಂಶವನ್ನು ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.

Agriculture 2

ಯಾವುದೇ ಮುನ್ಸೂಚನೆ ನೀಡದೇ ಸಾರ್ವಜನಿಕರ, ರೈತರ ಅಭಿಪ್ರಾಯವನ್ನು ಆಲಿಸಿದೇ, ಗ್ರಾಮಸಭೆಯನ್ನು ನಡೆಸದೆ ಸದರಿ ಗ್ರಾಮಗಳನ್ನ ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ನಿರ್ಣಯ ಮಾಡಿರುವುದು ಜನವಿರೋಧಿ ಕ್ರಮವಾಗಿದೆ. ಬಹುಮತವನ್ನು ಲೆಕ್ಕಿಸದೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಕೆಲವರಷ್ಟೇ ಸದಸ್ಯರು ಗ್ರಾಮಸಭೆಯಲ್ಲಿ ಏಕಪಕ್ಷೀಯ ನಿರ್ಣಯ ಕೈಗೊಂಡು ಗ್ರಾಮ ಪಂಚಾಯಿತಿ ಕಾಯ್ದೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಅಲ್ಲದೆ, ಈ ಜನವಿರೋಧಿ ನಿರ್ಣಯದ ಬಗ್ಗೆ ಗ್ರಾಮಗಳ ಗ್ರಾಮಸ್ಥರು, ರೈತರು ಹಾಗೂ ಎಲ್ಲಾ ಸಾರ್ವಜನಿಕರು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಹೂಡಿರುವುದಾಗಿ ತಿಳಿದುಬಂದಿದೆ ಎಂದು ಸಚಿವರು ಪತ್ರದಲ್ಲಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಜನತೆಯ ಹಿತದೃಷ್ಟಿಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಮತ್ತು ಸೋಮನಹಳ್ಳಿ ಗ್ರಾಮಗಳನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಿರುವ ನಿರ್ಣಯವನ್ನು ಕೂಡಲೇ ವಾಪಸ್ ಪಡೆಯಬೇಕು. ತಾವು ಸ್ಥಳೀಯರ ಮನವಿಗೆ ಓಗೊಟ್ಟು ಅವರ ಪರವಾಗಿ ನಿರ್ಧಾರ ಕೈಗೊಳ್ಳುತ್ತೀರಿ ಎಂದು ಆಶಿಸುತ್ತೇನೆ ಎಂದು ಸಚಿವರು ಪತ್ರದಲ್ಲಿ ಕೋರಿದ್ದಾರೆ.

TAGGED:ಕೃಷಿಗ್ರಾಮ ಪಂಚಾಯಿತಿಮಂಡ್ಯಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
18 minutes ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
21 minutes ago
PBKS vs LSG IPL 2026 1
Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
By Public TV
22 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
52 minutes ago
Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
1 hour ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?