ಮೇಕೆದಾಟು ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ದೇವೇಗೌಡ್ರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ: ಎಚ್‍ಡಿಕೆ

Public TV
1 Min Read
HDD

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂದು ದೇವೇಗೌಡರು ಸರ್ಕಾರಕ್ಕೆ ಎರಡು ರೀತಿಯ ಸಲಹೆಯನ್ನು ನೀಡಿದ್ದಾರೆ. ನಾನು ಕೂಡ ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

HD KUMARSWAMY 1

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ವಿಧಾನಸಭೆಯಲ್ಲಿ ತಮಿಳುನಾಡಿನ ಎಲ್ಲಾ ಪಕ್ಷಗಳು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ಬಿಲ್ ಪಾಸ್ ಮಾಡಿದ್ದಾರೆ. ಅಕ್ಕಪಕ್ಕದ ರಾಜ್ಯಗಳ ಮೇಲೆ ಅದರಲ್ಲೂ ಕರ್ನಾಟಕದ ಮೇಲೆ ತಮಿಳುನಾಡು ಸರ್ಕಾರ ಒತ್ತಡ ಹೇರುವಂತದ್ದು ನಿರಂತರವಾಗಿ ನಡೆಯುತ್ತಿದೆ. ಬೆಂಗಳೂರು ನಗರಕ್ಕೆ ಹೆಚ್ಚುವರಿ ನೀರನ್ನು ಕುಡಿಯಲು ಬಳಸುವ ಹಕ್ಕಿದೆ. ಅವರ ನೀರನ್ನು ಕೊಡದಿದ್ದಾಗ ಅವರು ಕೇಳಬೇಕು. ಈ ಬಗ್ಗೆ ದೇವೇಗೌಡರು ಸರ್ಕಾರಕ್ಕೆ ಎರಡು ರೀತಿಯ ಸಲಹೆ ನೀಡಿದ್ದಾರೆ. ಸರ್ವಪಕ್ಷ ನಾಯಕರನ್ನು ದೆಹಲಿಗೆ ಕರೆದೊಯ್ಯುವ ವಿಚಾರವನ್ನು ಸಭೆಯಲ್ಲಿ ಹೇಳಿದ್ದಾರೆ. ಮೊದಲು ಸೋಮವಾರ ಸಚಿವ ಗೋವಿಂದ ಕಾರಜೋಳ ದೆಹಲಿಗೆ ಹೋಗಿದ್ದಾರೆ. ನಂತರ ಸಂಸದರ ನಿಯೋಗ ಭೇಟಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆಮೇಲೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು. ಇದನ್ನೂ ಓದಿ:  ಕಾಶ್ಮೀರ್‌ ಫೈಲ್ಸ್‌ನಲ್ಲಿ ಏನಿದೆ?: ಹೆಚ್‍ಡಿಕೆ ಪ್ರಶ್ನೆ

mekedatu 1 1

ನಮ್ಮ ನೀರನ್ನು ಪಡೆಯುವುದರಲ್ಲಿ ಅನ್ಯಾಯ ಆಗಿದೆ ಅದನ್ನು ಸರ್ಕಾರ ತ್ವರಿತಗತಿಯಲ್ಲಿ ಸರಿಪಡಿಸಬೇಕು. ನಮ್ಮ ಭಾಗದಲ್ಲಿ ಡ್ಯಾಮ್ ಕಟ್ಟೋಕೆ ತಕರಾರು ಇಲ್ಲ ಎಂದು ತಮಿಳುನಾಡು ವಕೀಲರೆ ಹೇಳಿದ್ದಾರೆ. ಕುಡಿಯುವ ನೀರಿಗೆ ಯಾವುದೇ ತಕಾರಾರಿಲ್ಲ ಎಂದು ಹೇಳಲಾಗಿದೆ. ನಮಗೆ ಎನ್ವಿರಾನ್ಮೆಂಟಲ್ ಕ್ಲಿಯರೆನ್ಸ್ ಬೇಕಾಗಿದೆ. ನಿರ್ಣಯಕ್ಕೂ ನಮಗೂ ಸಂಬಂದವಿಲ್ಲ. ಸರ್ಕಾರ ಬದ್ಧತೆ ತೋರಿಸಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ದಿನ ಬಳಕೆಯ ಸಿಲಿಂಡರ್‌ ಬೆಲೆ 50 ರೂ. ಏರಿಕೆ

ಸರ್ಕಾರ ಯೋಜನೆಗಳಿಗೆ 1,000 ಕೋಟಿ ಇಟ್ಟರೆ ಸಾಲದು ಕೆಲಸ ಆಗಬೇಕು. ಕಾವೇರಿ ಡೆಲ್ಟಾ ಜಾಗದಲ್ಲಿ ತಮಿಳುನಾಡು ಸರ್ಕಾರ ಕೆಲ ಚಟುವಟಿಕೆ ನಡೆಸುತ್ತಿದೆ. ಏನು ಚಟುವಟಿಕೆ ಮಾಡ್ತಿದ್ದಾರೆ. ಕೇಂದ್ರ ಸರ್ಕಾರ ಯಾವತ್ತೂ ತಮಿಳುನಾಡು ಚಟುವಟಿಕೆಗೆ ಎಂದಿಗೂ ವಿರೋಧ ಮಾಡಿಲ್ಲ ಅವರ ಚಟುವಟಿಕೆ ನಡೆಯುತ್ತಲೆ ಇದೆ. ಹೀಗೆ ಆದ್ರೆ 9 ಸಾವಿರ ಕೋಟಿ ಡಿಪಿಆರ್ ಎಲ್ಲಿಗೆ ಹೋಗುತ್ತೆ ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *