Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇಕೆದಾಟು ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಹೆಚ್‍ಡಿಕೆ ಕಿಡಿ

Bengaluru City

ಮೇಕೆದಾಟು ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಹೆಚ್‍ಡಿಕೆ ಕಿಡಿ

Public TV
Last updated: March 6, 2022 9:24 am
Public TV
Share
4 Min Read
KUMARASWAMY
SHARE

ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಮೇಕೆದಾಟು ವಿಷಯವನ್ನಿಟ್ಟುಕೊಂಡು ಚುನಾವಣಾ ಆಟ ಪ್ರಾರಂಭಿಸಿವೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಮೇಕೆದಾಟು ಯೋಜನೆ ವಿವಾದವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಅವರೇ ವಿವಾದ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ. 1/7

— H D Kumaraswamy (@hd_kumaraswamy) March 6, 2022

ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ಮೇಕೆದಾಟು ಯೋಜನೆಗೆ ಒಕ್ಕೂಟ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಗುಡುಗಿದ್ದಾರೆ.

ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ʼಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. 2/7

— H D Kumaraswamy (@hd_kumaraswamy) March 6, 2022

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಮುಂದಿಟ್ಟುಕೊಂಡು ಚುನಾವಣಾ ಆಟ ಶುರು ಮಾಡಿವೆ ಎಂದು ಟೀಕಿಸಿದ್ದಾರೆ.

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ. 3/7

— H D Kumaraswamy (@hd_kumaraswamy) March 6, 2022

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದ ಆಫರ್ ಮುಗಿಯಲಿದೆ, ಬೇಗ ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿಕೊಳ್ಳಿ: ರಾಹುಲ್ ಗಾಂಧಿ

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ. 4/7

— H D Kumaraswamy (@hd_kumaraswamy) March 6, 2022

ಈಗ ಕೇಂದ್ರ ಸಚಿವರಾದ ಶೇಖಾವತ್ ಅವರು ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್‌

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ʼನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ʼಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು. 6/7

— H D Kumaraswamy (@hd_kumaraswamy) March 6, 2022

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ಹೊಸ ವರಸೆ ಶುರು ಮಾಡಿತೇ ಎನ್ನುವ ಸಂಶಯ ನನ್ನದು ಎಂದಿದ್ದಾರೆ.

ಈ ಬಗ್ಗೆ; 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ʼಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? 7/7#ರಾಷ್ಟ್ರೀಯ_ಪಕ್ಷಗಳ_ಮೇಕೆದಾಟು_ಮಕ್ಮಲ್‌ಟೋಪಿ

— H D Kumaraswamy (@hd_kumaraswamy) March 6, 2022

ಈ ಬಗ್ಗೆ 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ಹಿಗ್ಗಿ ಹೀರೆಕಾಯಿ ಆಗಿದ್ದ ಕಾಂಗ್ರೆಸ್ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರ್ಕಾರದ ಜೊತೆ ಮಾತುಕತೆ ನಡೆಸಿ ಎಂದು ಕೇಂದ್ರ ಸಕಾರದ ಮೇಲೆ ಒತ್ತಡ ಹಾಕುತ್ತಾರಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.

TAGGED:bjpcentral governamentcongresshd kumarswamymekedatuಕಾಂಗ್ರೆಸ್ಕೇಂದ್ರ ಸರ್ಕಾರಬಿಜೆಪಿಮೇಕೆದಾಟುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

Vantamuri Woman Assault Case 12 people sentenced to 5 years in rigorous imprisonment
Belgaum

ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

Public TV
By Public TV
12 minutes ago
HD Kumaraswamy
Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
By Public TV
56 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
1 hour ago
BY Vijayendra
Bengaluru City

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

Public TV
By Public TV
1 hour ago
Piyush Goyal
Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
By Public TV
2 hours ago
Syed Naseer Hussain
Latest

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?