ರಾಮನಗರ: ಹಿಜಾಬ್ ಪ್ರಕರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್, ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ಗಲಾಟೆ ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಸಂಘರ್ಷ ದೊಡ್ಡ ದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ, ಕಾಂಗ್ರೆಸ್ ಹಾಗೂ ಸಂಘಟನೆಗಳ ನಾಯಕರ ಮಕ್ಕಳು ಯಾರೂ ಸರ್ಕಾರಿ ಶಾಲೆಯಲ್ಲಿ ಅವರ ಮಕ್ಕಳನ್ನು ಓದಿಸುತ್ತಿಲ್ಲ. ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡುತ್ತಿಲ್ಲ. ಬದಲಿಗೆ ಅಮಾಯಕ, ಬಡ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸಿ ಅವರು ಹೊರಟಿದ್ದಾರೆ. ಇಲ್ಲಿ ಅಮಾಯಕ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿಸಲಾಗದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಈ ಪ್ರಕರಣ ನಡೆಯುತ್ತಿರುವುದು ಕೇವಲ ಸರ್ಕಾರಿ ಶಾಲೆಯಲ್ಲಿ ಆಗಿದೆ. ಕಂಡವರ ಮಕ್ಕಳನು ಬಾವಿಗೆ ತಳ್ಳೋದನ್ನು ಮಾಡುತ್ತಿರುವುದು ಈ ರಾಜ್ಯದಲ್ಲಿ ಇದು ನಡೆಯುತ್ತಿದೆ. ಇದನ್ನ ಮಕ್ಕಳ ಪೋಷಕರು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
Advertisement
Advertisement
ಈಗಾಗಲೇ ಪ್ರತಿಭಟನೆ ಮಾಡುತ್ತಿರುವ ಮಕ್ಕಳ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ತಮ್ಮ ರಾಜಕೀಯಕ್ಕಾಗಿ ಈ ಪಕ್ಷಗಳು, ಸಂಘಟನೆಗಳು ಮಕ್ಕಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಮಕ್ಕಳ ವೀಡಿಯೋ ಇಟ್ಟುಕೊಂಡು ಕೋರ್ಟ್ ಕಚೇರಿಗೆ ಹೋಗುವಂತೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ ಶಾಂತಿಗೆ ಭಂಗ ತರುವ ಕೆಲಸವಾಗದಿರಲಿ: ಬೊಮ್ಮಾಯಿ
ಈಗಾಗಲೇ ಕೆಲವರ ಮೇಲೆ ಕೇಸ್ ಆಗಿದೆ. ಇದು ನಿರಂತರವಾಗಿ ನಡೆಯುತ್ತದೆ. ಆ ಮಕ್ಕಳಿಗೆ ಎರಡೊತ್ತಿನ ಊಟಕ್ಕೂ ಗತಿ ಇರಲ್ಲ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇದನ್ನು ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ಇವತ್ತು ವಿಚಾರಣೆ ಮಧ್ಯಾಹ್ನ ನಡೆಯಲಿದೆ. ನಾವು ನ್ಯಾಯಾಯಲಗಳ ಮೇಲೆ ಒತ್ತಡ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಈ ಪ್ರಕರಣವನ್ನು ತಿಳಿಗೊಳಿಸಬೇಕಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸುಪ್ರೀಂ ಅಂಗಳಕ್ಕೆ ಹಿಜಬ್ ವಿವಾದ – ತುರ್ತು ವಿಚಾರಣೆ ಇಲ್ಲ
ಪ್ರಿಯಾಂಕಾ ಗಾಂಧಿ ಟ್ವೀಟ್‌ಗೆ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಅವರವರ ಭಾವನೆಗೆ ಅವರು ಹೇಳಿದ್ದಾರೆ. ಅದಕ್ಕೆ ನಾನು ಇನ್ವಾಲ್ವ್ ಆಗುವುದಿಲ್ಲ. ಜನಪ್ರತಿನಿಧಿಯಾಗಿ ಮಾತನಾಡಿದ್ದು ತಪ್ಪು. ಆದರೆ ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಗೃಹ ಸಚಿವರು ಮತ್ತು ಸರ್ಕಾರದ ವೈಫಲ್ಯ ಈ ಪ್ರಕರಣದಲ್ಲಿ ಕಾಣುತ್ತಿದೆ. ಇದರಿಂದ ಅಮಾಯಕ ಮಕ್ಕಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದರು.
ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ಬಹುಮಾನ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಈ ದೇಶವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡುವವರ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನತೆಗೆ ಮನವಿ ಮಾಡುತ್ತೇನೆ. ಕುವೆಂಪುರವರ ಸರ್ವಜನಾಂಗದ ಶಾಂತಿಯ ತೋಟ ಅಂತಾ ಇದೆ. ಈ ನಾಡು ಶಾಂತಿಯ ಬೀಡು, ಹಾಗಾಗಿ ಇಂತಹದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ಬಿಜೆಪಿಯ ಸಚಿವರ ಮಗ ಓರ್ವ ಕೇಸರಿ ಶಾಲು ಹಂಚುತ್ತಿದ್ದಾರೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲಾಂದ್ರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂದು ಆಗುತ್ತದೆ ಎಂದು ಡಿಕೆಶಿಗೆ ಟಾಂಗ್ ನೀಡಿದರು.