Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು

Districts

ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? – ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು

Public TV
Last updated: July 21, 2024 5:15 pm
Public TV
Share
3 Min Read
H.D Kumaraswamy
SHARE

– ನಾನು ರಾಜ್ಯಕ್ಕೆ ಬರುವುದನ್ನು ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲ

ಹಾಸನ: ನಾನು ರಾಜ್ಯದ ಸಂಸದನಾಗಿ, ಕೇಂದ್ರ ಸಚಿವನಾಗಿ ರಾಜ್ಯಕ್ಕೆ ಬರುವುದನ್ನು ಸಹಿಸಲು ಕಾಂಗ್ರೆಸ್‌ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ರಾಜ್ಯ ಸರ್ಕಾರ ನನಗೆ ಹೆಜ್ಜೆಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಕಲೇಶಪುರದಲ್ಲಿ ಮಳೆಹಾನಿ ಪ್ರದೇಶಗಳಿಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರೊಂದಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಸಹಕಾರ ಕೇಳುವ ರಾಜ್ಯ ಸರ್ಕಾರ ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ಶನಿವಾರ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್‌ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ನಾನು ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಈ ರೀತಿ ನಿರ್ಬಂಧ ಹೇರಿದ್ದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

H.D Kumaraswamy 1

ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಎಂದರೆ ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಇವರು? ನಾನು ಬರಲೇಬಾರದು ಎನ್ನುವ ರೀತಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಕ್ಕೆ ಹೋದರೂ ಬೇಡ ಎನ್ನುತ್ತಾರೆ, ಉತ್ತರ ಕನ್ನಡ ಜಿಲ್ಲೆಗೆ ಹೋದರೂ ಎಂದರೆ ಅಲ್ಲಿಗೂ ಬೇಡ ಎನ್ನುತ್ತಾರೆ. ಸದ್ಯ ಹಾಸನಕ್ಕೆ ಬರಬೇಡಿ ಎನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಇವರಿಗೆ ಕೈಕಾಲು ನಡುಗುತ್ತದೆ ಎಂದು ಕುಟುಕಿದ್ದಾರೆ.

ಯಾವ ಸರ್ಕಾರವೂ 10 ಲಕ್ಷ ರೂ. ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವ ಮಂಕಾಳ ವೈದ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರಿಗೆ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಇದ್ದಂತೆ ಇಲ್ಲ. ಅವರಿಗೆ ಸಮಯ ಸಿಕ್ಕಿದರೆ ಕೊಡುಗು ಜಿಲ್ಲೆಗೆ ಭೇಟಿ ನೀಡಲಿ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಅಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದಾಗ ಅನೇಕರು ಮನೆಮಠ ಆಸ್ತಿಗಳನ್ನು ಕಳೆದು ನಿರಾಶ್ರಿತರಾಗಿದ್ದರು. ಕೆಲವೇ ತಿಂಗಳಲ್ಲಿ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ಕಟ್ಟಿಕೊಡಲಾಯಿತು. ಅಲ್ಲದೇ ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. ಆಹಾರ ಪದಾರ್ಥ ಕೊಳ್ಳಲು 50,000 ರೂ. ಕೊಟ್ಟಿದ್ದೇವೆ. ಬಹುಶಃ ಸಚಿವರಿಗೆ ಇದೆಲ್ಲಾ ಗೊತ್ತಿಲ್ಲದೆ ಇರಬಹುದು. ದಯಮಾಡಿ ಅವರು ಬಿಡುವು ಮಾಡಿಕೊಂಡು ಹೋಗಿ ಕೊಡಗಿನಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಮಳೆಹಾನಿ ಪ್ರದೇಶಗಳಿಗೆ ನಾನು, ಅಶೋಕ್ ಒಟ್ಟಿಗೆ ಭೇಟಿ ನೀಡಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದ್ದಾರೆ. ನಿನ್ನೆ ದಿನ ಶಿಶೂರು ಗುಡ್ಡದಲ್ಲಿ ಐದು ಕಿಲೋಮೀಟರ್ ದೂರದಲ್ಲಿ ಮಾಧ್ಯಮಗಳಿಗೆ ತಡೆಗೋಡೆ ಇಟ್ಟು ಏನು ಚಿತ್ರೀಕರಣ ಮಾಡದ ರೀತಿ ಆದೇಶ ಮಾಡಿದ್ದರು. ನಾನು ಯಾರನ್ನೂ ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಬಹುಶಃ ರಾಜ್ಯದ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವ ಕೆಲ ಸಚಿವರಿಗೆ ಇಂಥಹ ವಿವೇಕ ಇದ್ದಂತೆ ಇಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.

ಡಿಕೆಶಿಗೆ ತಿರುಗೇಟು
ಮಳೆ, ನೆರೆ ಪರಿಹಾರ ಕಾರ್ಯಕ್ಕೆ ಸೇನೆಯನ್ನು ಕರೆದುಕೊಂಡು ಬರಬೇಕಿತ್ತು ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಚಾರವಾಗಿ, ಅವರು ಯಾವ ಅರ್ಥದಲ್ಲಿ ಸೇನೆಯನ್ನು ಕರೆಸಬೇಕು ಎಂದು ಹೇಳಿದ್ದಾರೋ ಗೊತ್ತಿಲ್ಲ. ಪಾಪ. ಅವರು ಮಿಲಿಟರಿಯನ್ನು ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ನಾನು ಖಿನ್ನತೆಯಲ್ಲಿ ಇದ್ದೀನಿ ಎಂದು ಅವರು ಹೇಳಿದ್ದಾರೆ. ನನ್ನನ್ನು ನೋಡಿದರೆ ಆ ರೀತಿ ಇರುವವನಂತೆ ಕಾಣುತ್ತೇನೆಯೇ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.‌ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌, ಸಿಮೆಂಟ್‌ ಮಂಜುನಾಥ್‌, ಹೆಚ್.ಕೆ.ಸುರೇಶ್‌ ಮೊದಲಾದವರು ಹಾಜರಿದ್ದರು.

TAGGED:congressd k shivakumarh d kumaraswamyhassanpoliticsSakleshpur
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
2 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
3 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
3 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
3 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?