Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

Districts

ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

Public TV
Last updated: October 21, 2021 3:18 pm
Public TV
Share
3 Min Read
MND HDK
SHARE

– ಐದು ಪ್ರಶ್ನೆಗಳಿಗೆ ಕಾಂಗ್ರೆಸ್ ಇನ್ನೂ ಉತ್ತರ ಕೊಟ್ಟಿಲ್ಲ
– ವೈಯಕ್ತಿಕ ವಿಚಾರಗಳ ಬಗ್ಗೆ ಆಸಕ್ತಿ ಇಲ್ಲವೆಂದ ದಳಪತಿ

ವಿಜಯಪುರ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

Contents
  • – ಐದು ಪ್ರಶ್ನೆಗಳಿಗೆ ಕಾಂಗ್ರೆಸ್ ಇನ್ನೂ ಉತ್ತರ ಕೊಟ್ಟಿಲ್ಲ – ವೈಯಕ್ತಿಕ ವಿಚಾರಗಳ ಬಗ್ಗೆ ಆಸಕ್ತಿ ಇಲ್ಲವೆಂದ ದಳಪತಿ
  • ರಾಷ್ಟ್ರೀಯ ಪಕ್ಷಗಳಿಂದ ನಿರ್ಲಕ್ಷ್ಯ:
  • ಕಾಂಗ್ರೆಸ್ ಉತ್ತರ ಕೊಟ್ಟಿಲ್ಲ
  • ವೈಯಕ್ತಿಕ ವಿಚಾರಗಳ ಬಗ್ಗೆ ಆಸಕ್ತಿ ಇಲ್ಲ!

ಸಿಂದಗಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಅಲ್ಪಸಂಖ್ಯಾತರನ್ನು ಮತಕ್ಕಾಗಿ ಓಲೈಸುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮುಸ್ಲಿಮರನ್ನು ದೇಶದಿಂದಲೇ ಓಡಿಸಬೇಕು ಎನ್ನುವ ಬಿಜೆಪಿ, ಇನ್ನೊಂದೆಡೆ ಅವರಿಗೆ ನಾವೂ ಸಹಾಯ ಮಾಡಿದ್ದೇವೆ. ನಮಗೆ ವೋಟು ಕೊಡಬೇಕು ಎಂದು ಕೇಳುತ್ತಿದೆ. ದ್ವಿಮುಖ ನೀತಿ ಎಂದರೆ ಇದೆ ಎಂದು ಕಿಡಿಕಾರಿದರು.

jds flag e1580382339690

ಮುಸ್ಲಿಮರು ನಮ್ಮ ಪರ ಇರಬೇಕು ಎನ್ನುವ ಬಿಜೆಪಿ, ಅವರನ್ನು ಸಮಾನವಾಗಿ ನೋಡಬೇಕಲ್ಲವೇ? ಹಾಗೆ ಮಾಡದೇ ಮತ ಮಾತ್ರ ಹಾಕಬೇಕು ಎಂದು ಕೇಳಿದರೆ ಹೇಗೆ? ಎಂದು ಹೆಚ್‍ಡಿಕೆ ಖಾರವಾಗಿ ಪ್ರಶ್ನಿಸಿದರು. ಬಿಜೆಪಿಯು ಉಪಚುನಾವಣೆಯಲ್ಲಿ ಹಿಂದುತ್ವದ ಆಧಾರದ ಮೇಲೆ ಮತಯಾಚನೆ ಮಾಡುತ್ತಿದೆಯಲ್ಲ ಎನ್ನುವ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರು ಮಾತ್ರ ಹಿಂದುಗಳಾ? ನಾವೇನು ಹೊರಗಿನಿಂದ ಬಂದಿದ್ದೇವೆಯಾ? ನಮಗೂ ಹಿಂದುತ್ವವಿದೆ, ನಂಬಿಕೆ-ಶ್ರದ್ಧೆಗಳಿವೆ. ಆದರೆ ನಾವು ಎಲ್ಲರನ್ನೂ ಒಳಗೊಂಡು ರಾಜಕೀಯ ಮಾಡಿದರೆ, ಬಿಜೆಪಿ ಅವರು ಕೇವಲ ಹಿಂದುತ್ವದ ಆಧಾರದ ಮೇಲೆ ಮಾತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

ಹೊರಗೆ ನಾವೆಲ್ಲ ಒಂದು, ನಾವೆಲ್ಲ ಹಿಂದು ಎಂದು ಹೇಳುತ್ತಲೇ ಒಳಗೆ ಮಾತ್ರ ಗರ್ಭಗುಡಿ ಸಂಸ್ಕøತಿಯನ್ನು ಜೀವಂತ ಬಿಜೆಪಿ ಇಟ್ಟುಕೊಂಡಿದೆ. ಕೆಲವನ್ನು ಬಿಟ್ಟರೆ ದೀನ-ದಲಿತರು, ಶೋಷಿತರಿಗೆ ಅಲ್ಲಿಗೆ ಪ್ರವೇಶ ಇದೆಯಾ? ಎಂದು ಪ್ರಶ್ನೆ ಮಾಡಿದರು.

BJP CONGRESS FLAG

ರಾಷ್ಟ್ರೀಯ ಪಕ್ಷಗಳಿಂದ ನಿರ್ಲಕ್ಷ್ಯ:

ಕಳೆದ ಐವತ್ತು ವರ್ಷಗಳಿಂದ ಸಿಂದಗಿ ಕ್ಷೇತ್ರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಮಾನವಾಗಿ ಕಡೆಗಣಿಸಿವೆ. ಇಲ್ಲಿನ ಪರಿಸ್ಥಿತಿ ನೋಡಿದರೆ ಎಲ್ಲ ರಾಜಕೀಯ ಪಕ್ಷಗಳು ತಲೆತಗ್ಗಿಸುವಂತೆ ಇದೆ. ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಕೊಟ್ಟ ನೀರಾವರಿ ಯೋಜನೆಗಳು ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಕೈಗೊಂಡ ಕಾರ್ಯಕ್ರಮಗಳು ಬಿಟ್ಟರೆ ಬೇರಾವ ಪ್ರಗತಿಯೂ ಇಲ್ಲಿ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

14 ತಿಂಗಳು ನಾನು ಮುಖ್ಯಮಂತ್ರಿ ಆಗಿದ್ದಾಗ 1,200 ಕೋಟಿ ರೂ. ಅನುದಾನವನ್ನು ಸಿಂದಗಿ ಕ್ಷೇತ್ರಕ್ಕೆ ನೀಡಿದ್ದೇನೆ. ದೇವೇಗೌಡರು ಇಲ್ಲದಿದ್ದರೆ ನಾವಿಲ್ಲಿ ಭತ್ತ, ಕಬ್ಬು ಬೆಳೆಯಲು ಸಾಧ್ಯವೇ ಆಗುತ್ತಿರಲಿಲ್ಲ ಎಂದು ಇಲ್ಲಿನ ಜನ ಈಗಲೂ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಉತ್ತರ ಕೊಟ್ಟಿಲ್ಲ

ಕಾಂಗ್ರೆಸ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತರ ವಿಷಯದ ಬಗ್ಗೆ ನಾನು ಕೇಳಿದ ಐದು ಪ್ರಶ್ನೆಗಳಿಗೆ ಇನ್ನೂ ಸಿದ್ದರಾಮಯ್ಯ ಅವರಾಗಲಿ ಅಥವಾ ಕಾಂಗ್ರೆಸ್ ಆಗಲಿ ಉತ್ತರ ನೀಡಿಲ್ಲ. ಅದರ ಹೊರತಾಗಿ ಅನಗತ್ಯ ವಿಷಯಗಳ ಬಗ್ಗೆ ಆ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆಂದು ತಿರುಗೇಟು ಕೊಟ್ಟರು.

HBL SIDDU 1

ವೈಯಕ್ತಿಕ ವಿಚಾರಗಳ ಬಗ್ಗೆ ಆಸಕ್ತಿ ಇಲ್ಲ!

ಯಾರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡುವ ಆಸಕ್ತಿ ನನಗಿಲ್ಲ. ನನ್ನ ಬಗ್ಗೆ ಕಾಮೆಂಟ್ ಮಾಡೋರನ್ನು ನಾನು ಕೇರ್ ಮಾಡಲ್ಲ. ಜನರಿಗೆ ಮಾಡುವ ಕೆಲಸ ಬೇಕಾದಷ್ಟಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಜನರು ಅನೇಕ ಸಮಸ್ಯೆಗಳಿಂದ ಒದ್ದಾಡುತ್ತಿದ್ದಾರೆ. ಅವರಿಗೆ ಪರಿಹಾರ ಕೊಡುವುದು ಎಲ್ಲರ ಆದ್ಯತೆ ಆಗಬೇಕು. ನಾನು ಆರ್‍ಎಸ್‍ಎಸ್ ಸೇರಿದಂತೆ ಯಾವುದೇ ಸಂಘ ಸಂಸ್ಥೆ ಬಗ್ಗೆ ವೈಯಕ್ತಿಕ ನೆಲೆಗಟ್ಟಿನಲ್ಲಿ ಮಾತನಾಡಿಲ್ಲ. ನನ್ನ ಅನುಭವಕ್ಕೆ ಬಂದ, ನನಗೆ ತಿಳಿದ ವಿಷಯಗಳನ್ನಷ್ಟೇ ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

ಈವರೆಗೆ ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ 30 ಹಳ್ಳಿಗಳ ಜನರನ್ನು ಭೇಟಿಯಾಗಿದ್ದೇನೆ. ಇಂದು 14 ಹಳ್ಳಿಗಳಿಗೆ ಭೇಟಿ ನೀಡಲಿದ್ದೇನೆ. ನಾಳೆಯೂ ಇಲ್ಲಿಯೇ ಪ್ರಚಾರ ನಡೆಸಿ ನಾಡಿದ್ದು(ಶನಿವಾರ) ಹಾನಗಲ್‍ಗೆ ತೆರಳುತ್ತೇನೆ. ಸಿಂದಗಿಯಲ್ಲಿ ನಾನು ಗೆಲ್ಲುತ್ತೇವೆ. ಪ್ರತಿ ಹಳ್ಳಿಯಲ್ಲೂ ಪಕ್ಷದ ಪರವಾದ ವಾತಾವರಣ ಇದೆ. ಹಾನಗಲ್ ಕ್ಷೇತ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲವಾದ ಪೈಪೋಟಿ ನೀಡುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

TAGGED:hd kumaraswamyPublic TVsiddaramaiahSindagi Assembly constituencyyeddyurappaಪಬ್ಲಿಕ್ ಟಿವಿಯಡಿಯೂರಪ್ಪಸಿಂದಗಿ ವಿಧಾನಸಭೆ ಕ್ಷೇತ್ರಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
7 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
7 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?