ನವದೆಹಲಿ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು (Railway Project) ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ.
Advertisement
ದೆಹಲಿಯಲ್ಲಿ (New Delhi) ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಹೆಚ್‌ಡಿಕೆ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಹೆಚ್‌ಡಿಕೆ ಸುದೀರ್ಘ ಸಮಾಲೋಚನೆ ನಡೆಸಿದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು-ಸತ್ಯಮಂಗಲ-ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಮನವಿ ಮಾಡಿದರು. ಇದನ್ನೂ ಓದಿ: ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆ ಪ್ರಸ್ತಾವನೆ ನನ್ನ ಮುಂದೆ ಬಂದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
Advertisement
Advertisement
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್‌ಡಿಕೆ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜೊತೆ ಮಾಹಿತಿ ಹಂಚಿಕೊಳ್ಳಲಾಯಿತು. ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಮೈಸೂರಿನ ಹೋಟೆಲ್‌ನಲ್ಲಿ ನಡೆದಿತ್ತಾ ಸ್ಕೆಚ್? – ಇಡೀ ಪ್ಲಾನ್ ಮಾಸ್ಟರ್ ಮೈಂಡ್ ಯಾರು?
Advertisement