ಬೆಂಗಳೂರು: ಮುಳುಗಿರುವ ಕರ್ನಾಟಕದ ಜನರ ಸಮಸ್ಯೆಗಳಿಗೆ ಕೊನೆಯೇ ಇಲ್ಲವಾಗಿದೆ. ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರ ರೆಡ್ ಅಲರ್ಟ್ ಘೋಷನೆ ಮಾಡಿದೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಣೆ ಮಾಡುವ ಕಾರ್ಯವನ್ನು ಆಯಾ ಜಿಲ್ಲಾಡಳಿತ ನಡೆಸುತ್ತಿವೆ. ಪ್ರವಾಹ ಪರಿಸ್ಥಿತಿ ಉಂಟಾಗಿ ದಿನಗಳೇ ಕಳೆದರು ನೀರಿನ ಪ್ರಮಾಣ ಕಡಿಮೆ ಆಗುವ ಯಾವುದೇ ಮುನ್ಸೂಚನೆ ಕೂಡ ಲಭಿಸಿಲ್ಲ. ಈ ನಡುವೆ ಕಳೆದ ಕೆಲ ದಿನಗಳಿಂದ ಅನಾರೋಗ್ಯ ಬಳುತ್ತಿದ್ದ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಅಲಿಸುತ್ತೇನೆ ಎಂದಿದ್ದಾರೆ.
ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ.
ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ.#KarnatakaFloods pic.twitter.com/ygMw4davTE
— H D Kumaraswamy (@hd_kumaraswamy) August 9, 2019
Advertisement
ನಿನ್ನೆಯಷ್ಟೇ ತಾವು ಜ್ವರದಿಂದ ಬಳುತ್ತಿದ್ದು, ಆದ್ದರಿಂದ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲು ಆಗುತ್ತಿಲ್ಲ ಎಂದು ತಿಳಿಸಿದ್ದರು. ಆದರೆ ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ಕಂಡು ನನ್ನ ಮನಸ್ಸು ತುಡಿಯುತ್ತಿದೆ ಎಂದು ಎಚ್‍ಡಿಕೆ ಹೇಳಿದ್ದಾರೆ. ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡುವ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ಅವರು, ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನವಲಗುಂಡ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸುಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾತ್ರೋರಾತ್ರಿ ದೆಹಲಿ ತಲುಪಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಕ್ಷೇತ್ರವೂ ನೆರೆ ಪೀಡಿತವಾಗಿದ್ದು, ಕ್ಷೇತ್ರದ ಜವಾಬ್ದಾರಿಯನ್ನು ನೋಡಿಕೊಳ್ಳಲು ಪುತ್ರ ಯತೀಂದ್ರ ಅವರಿಗೆ ಹೊಣೆ ನೀಡಿದ್ದಾರೆ. ಆದರೆ ಇಂದು ಅವರು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ಭಾಗಿಯಾಗುವ ಮಾಹಿತಿ ಮಾಹಿತಿ ಲಭಿಸಿದ್ದು, ಕಾಂಗ್ರೆಸ್ ಪಕ್ಷದ ಹೊಸ ಅಧ್ಯಕ್ಷರ ನೇಮಕದ ಕುರಿತ ಮಹತ್ವ ಸಭೆ ಇದಾಗಿದೆ. ಕಣ್ಣೀನ ಶಸ್ತ್ರ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದ್ದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.
Advertisement
ಕಳೆದ ಮೂರು ದಿನಗಳಿಂದ ಉತ್ತರ ಕರ್ನಾಟಕದ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಲಿರುವ ಬಿಎಸ್‍ವೈ ಪ್ರವಾಹದ ಕುರಿತು ಪರಿಹಾರ ಕಾರ್ಯದ ಕುರಿತು ಹೆಚ್ಚಿನ ಮಾಹಿತಿ ನೀಡುವ ನಿರೀಕ್ಷೆ ಇದೆ.