Bengaluru CityDistrictsKarnatakaLatestLeading NewsMain Post

ಕನ್ನಡ ಧ್ವಜಕ್ಕೆ ಬೆಂಕಿ – ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್‍ಡಿಕೆ ಆಗ್ರಹ

Advertisements

ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ

ಎಂಇಎಸ್ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯಕ್ಕೆ ವಿರುದ್ಧ ರಾಜ್ಯ ಸರ್ಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್ ಉತ್ಪಾದನೆಗೆ 76,000 ಕೋಟಿ – ಕೇಂದ್ರ ಸಂಪುಟ ಅನುಮೋದನೆ

ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಂದು ವೇಳೆ ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published.

Back to top button