ಉಡುಪಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ (Shri Krishna Matha) ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನ ಭೇಟಿಯಾಗಿ ಆಶೀರ್ವಾದ ಪಡೆದರು. ಶ್ರೀಪಾದರು ಸಚಿವರಿಗೆ ಫಲಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಶ್ರೀಕೃಷ್ಣ ಮಠದ ಧಾರ್ಮಿಕ ಪರಂಪರೆ ಹಾಗೂ ಪರ್ಯಾಯ ಸಂಪ್ರದಾಯದ ಹಿನ್ನೆಲೆ ಸಚಿವರ ಭೇಟಿ ಮಹತ್ವ ಪಡೆದುಕೊಂಡಿತು.
ಮಠಕ್ಕೆ ಆಗಮಿಸಿದ ಸಚಿವರನ್ನು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಸುದರ್ಶನ್ ಭಟ್ ಕಲ್ಯ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಬಿಜೆಪಿಯ ಮಧುಕರ್ ಮುದ್ರಾಡಿ ಹಾಗೂ ಜೆಡಿಎಸ್ ಮುಖಂಡ ವಾಸುದೇವ ರಾವ್ ಉಪಸ್ಥಿತರಿದ್ದರು.


