ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇರಳ ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ.
Advertisement
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಅವರು, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ನಮ್ಮ ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶ್ರೀ ರಾಜರಾಜೇಶ್ವರ ಸ್ವಾಮಿ ಅವರಿಗೆ ಪೂಜೆ ಸಲ್ಲಿಸಿದ್ದರು ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ಸಿನಿಜರ್ನಿಯನ್ನ ಕೊನೆಗೊಳಿಸುತ್ತಾರಾ ನಾಟ್ಯಸುಂದರಿ ಸಾಯಿ ಪಲ್ಲವಿ?
Advertisement
Advertisement
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಬಂಡೆಪ್ಪಾ ಕಾಶೆಂಪೂರ ಅವರು ಕುಮಾರಸ್ವಾಮಿ ಜೊತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಇತರೆ ಸದಸ್ಯರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: 4ನೇ ಕ್ಲಾಸ್ ಪರೀಕ್ಷೆಯಲ್ಲಿ ಅಪ್ಪು ಬಗ್ಗೆ ಪ್ರಶ್ನೆ- ಬೆಂಗಳೂರು ಶಾಲೆಯಿಂದ ಗೌರವ
Advertisement
ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು.