Connect with us

Districts

ಜನರು ಸಂಕಷ್ಟದಲ್ಲಿರುವಾಗ ಬಿಜೆಪಿಯ ಈ ಗೊಂದಲ ಸರಿಯಲ್ಲ: ಹೆಚ್‍ಡಿಕೆ

Published

on

Share this

ಮಂಡ್ಯ: ಬಿಜೆಪಿಯಲ್ಲಿ ಕಳೆದ ಎರಡು ವರ್ಷಗಳಿಂದಲೂ ಸಿಎಂ ಬದಲಾವಣೆ ವಿಚಾರ ಕೇಳಿ ಬರುತ್ತಿದೆ. ಸದ್ಯ ರಾಜ್ಯದಲ್ಲಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಇಂತಹ ಸ್ಥಿತಿಯಲ್ಲಿ ಈ ರೀತಿಯ ವಾತಾವರಣ ನಿರ್ಮಾಣ ಮಾಡಿ ಸಮಯ ವ್ಯರ್ಥ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‍ಡಿಕೆ, ಬಿಜೆಪಿಯಲ್ಲಿ ಎರಡು ವರ್ಷಗಳಿಂದಲೂ ಸಿಎಂ ಬದಲಾವಣೆ ವಿಚಾರ ನಡೆಯುತ್ತಿದೆ. ಇದರಿಂದ ಸಮಯ ವ್ಯರ್ಥವಾಗುತ್ತಿದೆಯೇ ಹೊರತು, ಅಭಿವೃದ್ಧಿ ಕೆಲಸಗಳು ಆಗುವುದಿಲ್ಲ. ಆದಷ್ಟು ಬೇಗ ಈ ಗೊಂದಲಗಳನ್ನು ಬಗೆಹರಿಸಿಕೊಂಡು ಉತ್ತಮ ಆಡಳಿತ ನೀಡಬೇಕೆಂದು ಬಿಜೆಪಿ ಹೈಕಮಾಂಡ್‍ಗೆ ಸಲಹೆ ನೀಡಿದ್ದಾರೆ.

ಯಡಿಯೂರಪ್ಪ ರಾಜೀನಾಮೆ ಕೊಡುವ ವಿಚಾರ ನನಗೆ ಸಂಬಂಧಿಸಿದ ವಿಷಯ ಅಲ್ಲ, ಅದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರ ಪಕ್ಷದ ನಿರ್ಧಾರದಲ್ಲಿ ನಾನು ಮೂಗು ತೂರಿಸುವುದು ಕ್ಷೋಭೆ ತರುವುದಿಲ್ಲ. ಬಿಎಸ್‍ವೈಗೆ ಮಠಾಧೀಶರ ಬೆಂಬಲ ವಿಚಾರದ ಬಗ್ಗೆ ನಾನು ಏನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಭಾವನೆ ಇದೆ. ಹೀಗಾಗಿ ಅವರುಗಳು ಅವರ ಭಾವನೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಮಠಾಧೀಶರ ಲಾಬಿಯಿಂದ ಯಡಿಯೂರಪ್ಪ ಬೆಳೆದಿಲ್ಲ: ಬಿ.ವೈ ರಾಘವೇಂದ್ರ

Click to comment

Leave a Reply

Your email address will not be published. Required fields are marked *

Advertisement