ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವುದು ಖಚಿತ ಎಂದು ನಟ ನಿಖುಲ್ ಕುಮಾರಸ್ವಾಮಿ ಅವರು ಒಪ್ಪಿಕೊಂಡಿದ್ದು, ಆದ್ರೆ ಸುಮಲತಾ ಅಂಬರೀಶ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದ್ದಾರೆ.
ಮದ್ದೂರಿನ ಬಳಿ ಬಸ್ ಉರುಳಿ 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿಮ್ಸ್ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು, ರಾಷ್ಟ್ರಾಧ್ಯಕ್ಷರು ಸೇರಿದಂತೆ ಎಲ್ಲರು ಕುಳಿತು ತೀರ್ಮಾನ ಮಾಡಿದ್ದಾರೆ. ನನಗೆ ಟಿಕೆಟ್ ಕೊಡಲು ಪಕ್ಷ ತೀರ್ಮಾನ ಮಾಡಿದೆ. ನಾನು ನನ್ನ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ರು.
Advertisement
Advertisement
ಇದೇ ವೇಳೆ ಮೈಸೂರಿನಿಂದ ಸ್ಪರ್ಧೆ ಮಾಡುತ್ತಾರೆ ಎಂದು ತಮ್ಮ ಬಗ್ಗೆ ಕೇಳಿ ಬಂದ ಊಹಾಪೋಹವನ್ನು ನಿಖಿಲ್ ನಿರಾಕರಿಸಿದ್ರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಕಾಂಗ್ರೆಸ್‍ನವರ ಜೊತೆ ಮಾತನಾಡುತ್ತೇನೆ. ದೊಡ್ಡವರು ಕೂಡ ಕುಳಿತು ಮಾತನಾಡ್ತಾರೆ. ಹೀಗಾಗಿ ಕಾಂಗ್ರೆಸ್‍ನವರು ನನಗೆ ಸಪೋರ್ಟ್ ಮಾಡ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ರು.
Advertisement
ಸುಮಲತಾ ಅವರ ಸ್ಪರ್ಧೆ ಬಗ್ಗೆ ಮಾತನಾಡಿ, ಸುಮಕ್ಕನ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಸ್ಪರ್ಧೆ ಬಗ್ಗೆ ನಾನು ಮಾತನಾಡಲ್ಲ. ಸುಮಲತಾ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಅಭಿ ನನ್ನ ತಮ್ಮನ ರೀತಿ. ಅಂಬರೀಶ್ ಅವರು ನನ್ನನ್ನು ಮಗನ ರೀತಿ ಕಾಣುವವರು. ಅವರ ಬಗ್ಗೆ ತುಂಬಾ ಗೌರವವಿದೆ. ಕುರುಕ್ಷೇತ್ರ ಸಿನಿಮಾ ಚಿತ್ರೀಕರಣದ ವೇಳೆ ಅವರ ಜೊತೆ ತುಂಬಾ ಸಮಯ ಕಳೆದಿದ್ದೇನೆ ಎಂದು ತಿಳಿಸಿದ್ರು.
Advertisement
ನಿಖಿಲ್ ಸ್ಥಳೀಯರಲ್ಲ ಎಂಬ ಟೀಕೆ ಬಗ್ಗೆ ನಾನು ಮಾತನಾಡಲ್ಲ. ನಾನು ಇಲ್ಲೇ ಇರುತ್ತೇನೆ. ಕಚೇರಿ, ಮನೆ ಮಾಡಿ ಶೀಘ್ರದಲ್ಲೇ ತೊಡಗಿಸಿಕೊಳ್ಳುತ್ತೇನೆ ಎಂದು ತಮ್ಮ ಸ್ಪರ್ಧೆಯನ್ನು ಅಧಿಕೃತಗೊಳಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv