ಬೆಂಗಳೂರು: ಜಂತಕಲ್ ಎಂಟರ್‍ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ವಿಶೇಷ ತನಿಖಾ ತಂಡ(ಎಸ್‍ಐಟಿ) ಬಂಧನ ಭೀತಿಗೆ ಒಳಗಾಗಿದ್ದ ಎಚ್‍ಡಿಕೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Advertisement
ಒಬ್ಬರ ಭದ್ರತಾ ಶ್ಯೂರಿಟಿ ಮತ್ತು ವೈಯಕ್ತಿಕ ಬಾಂಡ್ ಒದಗಿಸಬೇಕು. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು. ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಕೆಯಾಗುವವರೆಗೂ ಎಸ್‍ಐಟಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಎಚ್‍ಡಿಕೆಗೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.
Advertisement
ಈ ಹಿಂದೆ ವಿಶೇಷ ಲೋಕಾಯುಕ್ತ ನ್ಯಾಯಾಲಯ ಕುಮಾರಸ್ವಾಮಿ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್‍ಡಿಕೆ ಹೈಕೋರ್ಟ್ ಮೊರೆ ಹೋಗಿದ್ದರು.
Advertisement
ಏನಿದು ಜಂತಕಲ್ ಮೈನಿಂಗ್ ಕೇಸ್?: ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್ ಕಂಪೆನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೀರೆಕಂದವಾಡಿ ಮತ್ತು ತನಿಗೇಹಳ್ಳಿಯಲ್ಲಿ ಅದಿರು ಸಾಗಿಸಲು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಆಗಿನ ಸರ್ಕಾರ 2007ರಲ್ಲಿ ಅನುಮತಿ ನೀಡಿತ್ತು. ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪೆನಿಗೆ ಅನುಮತಿ ನೀಡಿದ ಪರಿಣಾಮ ಪಾಕಿಸ್ತಾನಕ್ಕೆ ಅಕ್ರಮ ಅದಿರು ಸಾಗಾಟವಾಗಿದ್ದು, ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು.
Advertisement
ಇದನ್ನೂ ಓದಿ: ಏನಿದು ಜಂತಕಲ್ ಮೈನಿಂಗ್ ಕೇಸ್? ಎಚ್‍ಡಿಕೆ ಮೇಲಿನ ಆರೋಪ ಏನು?