ಕರ್ನಾಟಕದ ಮಾಜಿ ರಾಜ್ಯಪಾಲ ಕೆ.ರೋಸಯ್ಯ ನಿಧನಕ್ಕೆ ಹೆಚ್‍ಡಿಕೆ ಕಂಬನಿ

Public TV
1 Min Read
KUMARASWAMY

ಬೆಂಗಳೂರು: ಇಂದು ಬೆಳಗ್ಗೆ ನಿಧನರಾದ ರಾಜ್ಯದ ಮಾಜಿ ರಾಜ್ಯಪಾಲರಾದ ಕೊನಿಜೇಟಿ ರೋಸಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Konijeti Rosaiah 2

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘2014ರಲ್ಲಿ ರಾಜ್ಯದ ರಾಜ್ಯಪಾಲರಾಗಿ, ಜೊತೆಗೆ ತಮಿಳುನಾಡಿನ ರಾಜ್ಯಪಾಲರು ಹಾಗೂ ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕೆ.ರೋಸಯ್ಯ ಅವರ ಹಠಾತ್ ನಿಧನ ನನಗೆ ತೀವ್ರ ಆಘಾತ ಉಂಟು ಮಾಡಿದೆ. ರಾಜಕೀಯದಲ್ಲಿ ಅಜಾತಶತ್ರು ಆಗಿದ್ದ ರೋಸಯ್ಯ ಅವರು ಪ್ರಾಮಾಣಿಕ, ದಕ್ಷ ಆಡಳಿತಗಾರರಾಗಿದ್ದರು. ಇದನ್ನೂ ಓದಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೇಟಿ ರೋಸಯ್ಯ ಇನ್ನಿಲ್ಲ

ಶ್ರೇಷ್ಟ ರಾಜಕೀಯ ಮುತ್ಸದ್ದಿಯಾಗಿದ್ದ ರೋಶಯ್ಯ ಅವರು ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಋಷಿಯಂತೆ ದುಡಿಯುತ್ತಿದ್ದರು. ಅವರ ಅಗಲಿಕೆ ದೊಡ್ಡ ನಷ್ಟ. ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಚೇತನಕ್ಕೆ ನನ್ನ ಶ್ರದ್ಧಾಂಜಲಿ ಎಂದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:  ಕೆಲವೊಮ್ಮೆ ಬಾಯಿ ತಪ್ಪಿ ಸತ್ಯ ಹೇಳುವ ಈಶ್ವರಪ್ಪಗೆ ಸಿಎಂ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

Share This Article
Leave a Comment

Leave a Reply

Your email address will not be published. Required fields are marked *